ಮಂಡ್ಯ

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಹೀಗಾಗಿ ತಾಯಿ ಚಿರತೆಯನ್ನು ಸೆರೆ ಹಿಡಿದು ಅದರೊಂದಿಗೆ ಮರಿಗಳನ್ನು ಸೇರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ಬೂತನಹೊಸೂರು ಗ್ರಾಮದ ನಿವಾಸಿ ಧರ್ಮರಾಜು ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು ಕಂಡು ಬಂದಿವೆ. ಆ ವೇಳೆ ರೈತರು ಚಿರತೆ ಮರಿಗಳನ್ನು ಹಿಡಿದು ಚೀಲವೊಂದರಲ್ಲಿ ಹಾಕಿ ಅರಣ್ಯ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಆರ್‌ಎಫ್‌ಒ ಶೈಲಜಾ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯು ಚಿರತೆ ಕಾರ್ಯಪಡೆ ಸಿಬ್ಬಂದಿಯೊಂದಿಗೆ ಬೋನನ್ನು ತಂದು ಚಿರತೆ ಮರಿಗಳನ್ನು ರಕ್ಷಿಸಿದ್ದಾರೆ.

ತಾಯಿಯಿಂದ ಬೇರ್ಪಟ್ಟ ಚಿರತೆ ಮರಿಗಳನ್ನು ತಾಯಿಯೊಂದಿಗೆ ಸೇರಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇ ಸ್ಥಳದಲ್ಲಿ ಚಿರತೆ ಕೇಜ್‌ನ್ನು ಇಟ್ಟು ಅದರೊಳಗೆ ಮರಿಗಳನ್ನು ಬಿಟ್ಟಿದ್ದಾರೆ. ಚಿರತೆಗಳು ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಇದರೊಂದಿಗೆ ಕಬ್ಬಿನ ಗದ್ದೆಗಳಲ್ಲಿ ಚಿರತೆಗಳು ಮರಿ ಹಾಕುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದರಿಂದ ರೈತರು ಭಯಭೀತಗೊಂಡಿದ್ದಾರೆ. ಹೀಗಾಗಿ ಚಿರತೆ ಸೆರೆಗೆ ಕ್ರಮ ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತಾಯಿ ಚಿರತೆಯು ಮರಿಗಳನ್ನು ಬಿಟ್ಟು ಹೋಗುವಂತಿಲ್ಲ. ಚಿರತೆ ಕೇಜ್‌ನಲ್ಲಿ ಮರಿಗಳನ್ನು ಹಾಕಿಟ್ಟು, ತಾಯಿಯೊಂದಿಗೆ ಸೇರಿಸುವ ಪ್ರಯತ್ನ ಮಾಡಿದ್ದೇವೆ ಎಂದು ವಲಯ ಅರಣ್ಯಾಧಿಕಾರಿ ಶೈಲಜಾ ಅವರು ತಿಳಿಸಿದರು. ಮರಿಗಳನ್ನು ಕಂಡು ಚಿರತೆ ಗೇಜ್‌ನೊಳಗೆ ತಾಯಿ ಚಿರತೆ ನುಗ್ಗಿದರೆ ಅದರೊಳಗೆ ಸೆರೆಯಾಗುತ್ತದೆ. ಆಗ ಕೆಲವು ದಿನಗಳು ತಾಯಿ ಚಿರತೆ ಹಾಗೂ ಮರಿಗಳನ್ನು ಒಟ್ಟಿಗೆ ಇಟ್ಟು, ಸಿಸಿ ಟಿವಿ ಕ್ಯಾಮೆರಾ ಮೂಲಕ ಅವುಗಳ ವರ್ತನೆ ಮೇಲೆ ನಿಗಾ ವಹಿಸಲಾಗುತ್ತದೆ. ಮರಿಗಳನ್ನು ತಾಯಿಯು ಹತ್ತಿರ ಸೇರದಿದ್ದರೆ ಇಲಾಖೆಯ ನಿಯಮಗಳಂತೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

3 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

3 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

3 hours ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

3 hours ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

14 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

14 hours ago