Mysore
27
broken clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

ಮಂಡ್ಯ: ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ.

ತಂದೆ ಪ್ರಭಾಕರ್‌, ತಾಯಿ ಜ್ಯೋತಿ ಹಾಗೂ ಮಗ ಸಂತೋಷ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ.

ಕಳೆದ ರಾತ್ರಿ ತಾಯಿ, ಮಗ ಮನೆಯಲ್ಲಿ ಸಾವನ್ನಪ್ಪಿದ್ದು, ಇಂದು ತಮ್ಮದೇ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದುಕೊಂಡು ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮನೆಯಲ್ಲಿ‌ ತಾಯಿ, ಮಗ ಹೇಗೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿಲ್ಲ. ಒಂದು ತಿಂಗಳ ಹಿಂದೆ ಮಗನಿಗೆ ಮದುವೆ ಮಾಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಮಂಡ್ಯ ಪೂರ್ವ ಠಾಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags:
error: Content is protected !!