arrest
ಮಂಡ್ಯ: ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಮಂಡ್ಯ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದು, ಹಣ ಮಾಡುವ ಉದ್ದೇಶದಿಂದ ವಿದ್ಯಾರ್ಥಿಗಳು ರಾಬರಿಗೆ ಇಳಿದಿದ್ದರು. ಬಂಧಿತರನ್ನು ಕಿರಣ್, ಕುಶಾಲ್ ಬಾಬು, ಗೋಕುಲ್ ಎಂದು ಗುರುತಿಸಲಾಗಿದೆ.
ಸಾರ್ವಜನಿಕರ ಕುತ್ತಿಗೆಗೆ ಹಗ್ಗೆ ಹಾಕಿ ಅವರನ್ನು ಹೆದರಿಸಿ ಅವರ ಬಳಿ ಇರುವ ಚಿನ್ನ, ಹಣ ಎಗರಿಸಿ ಪರಾರಿಯಾಗುತ್ತಿದ್ದರು.
ಬ್ಯುಸಿನೆಸ್ ನೆಪದಲ್ಲಿ ಒಂದಾಗಿದ್ದ ಮೂವರು ದರೋಡೆ ಮಾಡಲು ಹೊರ ರಾಜ್ಯದ ಕಾರನ್ನು ಬಾಡಿಗೆಗೆ ಪಡೆದಿದ್ದರು.
ಕೆಂಗೇರಿ ಬಸ್ ನಿಲ್ದಾಣದ ಬಳಿ ಬಸ್ ಕಾಯುವವರೇ ಇವರ ಟಾರ್ಗೆಟ್ ಆಗಿದ್ದರು. ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಹೋಗುತ್ತಿದ್ದರು. ಮಂಡ್ಯ ಬರುತ್ತಿದ್ದಂತೆ ಅವರ ಕುತ್ತಿಗೆಗೆ ಹಗ್ಗ ಹಾಕಿ ಅವರನ್ನು ಬೆದರಿಸಿ ಅವರ ಬಳಿ ಇದ್ದ ಚಿನ್ನ, ಹಣ ಎಗರಿಸಿ ಪರಾರಿಯಾಗುತ್ತಿದ್ದರು.
ಬಂದ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದರು. ಸದ್ಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…