ಮಂಡ್ಯ

ಮಂಡ್ಯ-ತೂಬಿನಕೆರೆ ಸರ್ವಿಸ್‌ ರಸ್ತೆ ಅವೈಜ್ಞಾನಿಕ : ವಿವಿಧ ಸಂಘಟನೆಗಳಿಂದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ

ಮಂಡ್ಯ : ತಾಲ್ಲೂಕಿನ ತೂಬಿನಕೆರೆ ಗ್ರಾಮ ಹಾಗೂ ಮಂಡ್ಯದಿಂದ ಪಾಂಡವಪುರ ಸರ್ವಿಸ್ ರಸ್ತೆಗೆ ತಿರುವು ಪಡೆಯುವ ಮತ್ತು ಬೆಂಗಳೂರು-ಮೈಸೂರು ಸರ್ವಿಸ್ ರಸ್ತೆಯ ಅವೈಜ್ಞಾನಿಕ ಕಾಮಗಾರಿಯನ್ನು ಖಂಡಿಸಿ ಕದಂಬ ಸೈನ್ಯ ಮತ್ತು ಭಾರತೀಯ ಕಿಸಾನ್ ಸಂಘ ಮತ್ತು ಕದಂಸ (ಸ್ವಾಭಿಮಾನ ಕೃಷ್ಣಪ್ಪ ಬಣ) ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ-275 ವಿರುದ್ಧ ತೂಬಿನಕೆರೆ ಸಮೀಪ ಪ್ರತಿಭಟಿಸಿದರು.

ತೂಬಿನಕೆರೆ-ಮಂಡ್ಯ- ಪಾಂಡವಪುರ ತಿರುವು ರಸ್ತೆ ಹಾಗೂ ಮೈಸೂರು-ಬೆಂಗಳೂರು ಸರ್ವಿಸ್ ರಸ್ತೆಯಲ್ಲಿ ಯಾವುದೇ ತಡೆಗೋಡೆ ನಿರ್ಮಾಣ ಮಾಡದೇ ಇರುವುದರಿಂದ ಸುಮಾರು 15 ಅಡಿ ಆಳದಲ್ಲಿ ರಸ್ತೆಗೆ ಹೊಂದಿಕೊಂಡಂತೆ ಕೆಲವು ಕುಟುಂಬಗಳವರು (ದನ-ಕರು ಹಸುಗಳು, ಆಡು ಕುರಿಗಳು) ಭಯದಿಂದ ಹಗಲು-ರಾತ್ರಿ ಎನ್ನದೇ ವಾಸಿಸುತ್ತಿದ್ದಾರೆ. ಈಗಾಗಲೇ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಪ್ರತಿನಿತ್ಯ ಸಾವಿರಾರು ಭಾರೀ ವಾಹನಗಳು, ಲಘು ವಾಹನಗಳು, ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಒಂದು ವೇಳೆ ಮನೆಯ ಮೇಲೆ ಬಿದ್ದರೆ ಹೆಚ್ಚಿನ ಪ್ರಾಣಾಪಾಯ ಸಂಭವಿಸಬಹುದು. ಇದಕ್ಕೆ ಸಂಪೂರ್ಣವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಹೊಣೆ ಆಗುತ್ತದೆ. ಆದ್ದರಿಂದ ಈ ಮನೆಗಳ ನಿವಾಸಿಗಳಿಗೆ ಬೇರೆ ನಿವೇಶನ ಕಲ್ಪಿಸಿ ಮನೆ ಕಟ್ಟಿಕೊಳ್ಳಲು ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಮಂಡ್ಯ-ಮೈಸೂರು ಸರ್ವಿಸ್ ರಸ್ತೆಯಲ್ಲಿ ಪದಾಚಾರಿಗಳಿಗೆ ವ್ಯವಸ್ಥಿತವಾದ ರಸ್ತೆ ಇಲ್ಲದೆ ರಸ್ತೆಯ ಬದಿಯಲ್ಲಿ ಬಿಸಿಲು-ಮಳೆಯಲ್ಲೇ ನಿಂತು ಜನರು, ವಿದ್ಯಾರ್ಥಿಗಳು, ರೋಗಿಗಳು, ಹಿರಿಯ ನಾಗರಿಕರು ವಾಹನಗಳನ್ನು ಹತ್ತಬೇಕಿದೆ. ತೂಬಿನಕೆರೆ ಗ್ರಾಮ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಶಾಲೆಗಳು, ಖಾಸಗಿ ಶಾಲಾ-ಕಾಲೇಜುಗಳಿದ್ದು, ವ್ಯಾಪಾರ ಕೇಂದ್ರವಾಗಿದೆ. ಎರಡೂ ಕಡೆಗಳಲ್ಲಿ ತಂಗುದಾಣ ನಿರ್ಮಾಣ ಮಾಡಿಲ್ಲ. ಒಳಚರಂಡಿ ನಿರ್ಮಾಣ ಮಾಡದೇ ಇರುವುದರಿಂದ ತ್ಯಾಜ್ಯದ ನೀರು ರಸ್ತೆಗೆ ಹರಡಿಕೊಂಡು ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿದೆ.

ತೂಬಿನ ಕೆರೆ ಗ್ರಾಮ ಸೇರಿದಂತೆ ಎಂಟು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ-275ದವರು ಅಪಾಯದಲ್ಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಮಾಡಿ ನಿವಾಸಿಗಳಿಗೆ ಬದಲಿ ನಿವೇಶನ ಕಲ್ಪಿಸಬೇಕು. ರಸ್ತೆಯ ಎರಡೂ ಬದಿಗಳಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಬೇಕು. ಒಳ ಚರಂಡಿ ನಿರ್ಮಾಣ ಮಾಡಬೇಕು. ಒಂದು ವೇಳೆ ಪ್ರತಿಭಟನೆಗೆ ಸ್ಪಂದಿಸದಿದ್ದರೆ ಮೈಸೂರಿನಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ-275 ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಭಾರತೀಯ ಕಿಸಾನ್ ಸಂಘದ ಪ್ರಾಂತ ಅಧ್ಯಕ್ಷ ಹಾಡ್ಯ ರಮೇಶ್ ರಾಜು, ಜಿಲ್ಲಾ ಅಧ್ಯಕ್ಷ ಬಿ.ಪಿ.ಅಪ್ಪಾಜಿ ಹಳೇಬೂದನೂರು, ಕದಸಂಸ ಸ್ವಾಭಿಮಾನ ಕೃಷ್ಣಪ್ಪ ಬಣದ ಜಿಲ್ಲಾ ಸಂಚಾಲಕ ಮೋಹನ್ ಚಿಕ್ಕಮಂಡ್ಯ, ಮುಖಂಡರಾದ ಪ್ರಕಾಶ್, ರಾಮಲಿಂಗಯ್ಯ, ಅಚ್ಯುತ, ಜಯರಾಮ, ಸ್ವಾಮಿ ಎಲೆಚಾಕನಹಳ್ಳಿ ಶ್ರೀಧರ್, ರಾಮಣ್ಣ, ಸಿದ್ದಲಿಂಗು, ರೇವಣ್ಣ, ನಾಗಣ್ಣ, ಚನ್ನೇಗೌಡ, ಕುಮಾರ್, ಜಯಮ್ಮ, ಕದಂಬ ಸೈನ್ಯ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಆರಾಧ್ಯ ಗುಡಿಗೇನಹಳ್ಳಿ, ಕಿಸಾನ್ ಸಂಘದ ಪದಾಧಿಕಾರಿಗಳಾದ ರುದ್ರಪ್ಪ ಬೂದನೂರು, ಬಸವರಾಜು, ಕಲ್ಲೇಶ್ ಹಾಗೂ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

1 hour ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

3 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

3 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

4 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

4 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

5 hours ago