ಮಂಡ್ಯ

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ

150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು ಯುವಜನರಿಗೆ ಉದ್ಯೋಗ

ಸ್ಥಳದಲ್ಲಿಯೇ ನೇಮಕಾತಿ ಪತ್ರ ನೀಡಿದ ಪ್ರತಿಷ್ಠಿತ ಕಂಪನಿಗಳು

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸ್ವಕ್ಷೇತ್ರ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ ದೊರೆಯಿತು.

ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ಭಾರತೀಯ ಭೂಸೇನೆ, ವಾಯುಪಡೆ, ನೌಕಾಪಡೆ ಸೇರಿದಂತೆ ಮೇಕಾನ್, ಭಾರತೀಯ ಉಕ್ಕು ಪ್ರಾಧಿಕಾರ (SAIL), ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC), ಲೈಲೋಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ (BHEL), ಜಿಂದಾಲ್ ಸ್ಟೀಲ್, ಹ್ಯುಂಡೈ ಸೇರಿದಂತೆ ಸುಮಾರು 150ಕ್ಕೂ ಹೆಚ್ಚು ಪ್ರತಿಷ್ಠಿತ ಉದ್ಯೋಗದಾತ ಕಂಪನಿಗಳು ಭಾಗಿಯಾಗಿ ಒಟ್ಟಾರೆ ಸಾವಿರಾರು ಪ್ರತಿಭಾನ್ವಿತ ಯುವಜನರನ್ನು ಆಯ್ಕೆ ಮಾಡಿಕೊಂಡಿವೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಉದ್ಯೋಗದಾತ ಕಂಪನಿಗಳು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸುತ್ತಿದ್ದು, ಎಷ್ಟು ಮಂದಿಗೆ ನೇಮಕಾತಿ ಆಗಿದೆ ಎಂಬ ಮಾಹಿತಿಯನ್ನು ಉದ್ಯೋಗ ಮೇಳದ ಕೊನೆಯ ದಿನವಾದ ಶನಿವಾರ ತಿಳಿಸಲಾಗುವುದು ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಮಂಡ್ಯ ಟೂ ಇಂಡಿಯಾ

ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವರು; ಮಂಡ್ಯ ಟೂ ಇಂಡಿಯಾ ಎನ್ನುವ ಘೋಷವಾಕ್ಯದೊಂದಿಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿತ್ತು. ಮಂಡ್ಯದ ಇತಿಹಾಸದಲ್ಲಿಯೇ ಇದೊಂದು ಮೈಲುಗಲ್ಲು ಎಂಬುದು ನನ್ನ ಭಾವನೆ. ರೈತಾಪಿ ಜನರ ಮಕ್ಕಳಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವುದು ನನ್ನ ಮಹದಾಸೆ ಆಗಿತ್ತು. ನನ್ನ ಮನವಿಗೆ ಸ್ಪಂದಿಸಿ ಅನೇಕ ಕಂಪನಿಗಳು ಮಂಡ್ಯಕ್ಕೆ ಬಂದಿವೆ ಎಂದು ಕೇಂದ್ರ ಸಚಿವರು ಹೇಳಿದರು.

ಉದ್ಯೋಗ ಮೇಳಕ್ಕೆ ಹೆಚ್ ಎಂಟಿ, ಬಿಹೆಚ್ ಇಎಲ್, ಎನ್ ಎಂಡಿಸಿ ಆರ್ ಐ ಎಲ್ ಸೇರಿದಂತೆ ಹಲವಾರು ಕಂಪನಿಗಳ ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕರು ಬಂದಿದ್ದರು. ಅವರೆಲ್ಲರೂ ನಮ್ಮ ಭಾಗದ ಯುವಜನರಿಗೆ ಉದ್ಯೋಗ ಕಲ್ಪಿಸಲು ಉತ್ಸುಕರಾಗಿದ್ದಾರೆ. ಎಲ್ಲರೂ ದೊಡ್ಡ ಪ್ರಮಾಣದಲ್ಲಿ ಯುವಕರಿಗೆ ಉದ್ಯೋಗ ನೀಡುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಪ್ರತಿದಿನವೂ ನನ್ನ ಮನೆಗೆ ಬರುವ ಅಸಂಖ್ಯಾತ ನಿರುದ್ಯೋಗಿ ಯುವ ಜನರು ಉದ್ಯೋಗ ಕೊಡಿಸಿ ಎಂದು ಕೇಳುತ್ತಾರೆ. ಅವರ ತಂದೆತಾಯಿ ಮಕ್ಕಳ ಭವಿಷ್ಯಕ್ಕಾಗಿ ಕನಸು ಕಟ್ಟಿಕೊಂಡಿದ್ದಾರೆ. ನಿತ್ಯವೂ ನೂರಾರು ಜನರು ನನ್ನ ಮನೆಯ ಬಳಿಗೆ ಬಂದಾಗ ನನ್ನ ಕೈಲಾದ ಸಹಾಯ ಮಾಡಿದ್ದೇನೆ. ಆದರೆ, ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಉದ್ಯೋಗ ಮೇಳದ ಮೂಲಕ ಸಾವಿರಾರು ಸಂಖ್ಯೆಯಷ್ಟು ಯುವ ಜನರಿಗೆ ಕೆಲಸ ಸಿಗಲಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಕೆಲ ಪ್ರತಿಷ್ಠಿತ ಕಂಪನಿಗಳು

ಮೇಕಾನ್, ಭಾರತೀಯ ಉಕ್ಕು ಪ್ರಾಧಿಕಾರ (SAIL), ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC), ಲೈಲೋಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ (BHEL), ಜಿಂದಾಲ್ ಸ್ಟೀಲ್, ಹುಂಡೈ, ಸಿಸಿಎಫ್, ಎನ್ ಎಸ್ ಐ ಎಲ್, ಬಿಇಎಲ್, ಹೊಂಡ ಮೋಟಾರ್ಸ್, ಟಿವಿಎಸ್, ಟೊಯೊಟಾ, ಮಾರುತಿ ಸುಜುಕಿ, ಎಂ ಜಿ ಮೋಟಾರ್ಸ್, ವೋಲ್ವೋ, ಕಿಯಾ ಮೋಟಾರ್ಸ್, ಮರ್ಸಿಡಿಸ್, ಬಿಎಂಡಬ್ಲ್ಯು, ಸ್ಕೋಡಾ, ಎಥರ್ ಸೇರಿದಂತೆ ನೂರಾ ಐವತ್ತಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಿದ್ದವು.

ನನ್ನ ಸಚಿವಾಲಯದ ಉನ್ನತ ಅಧಿಕಾರಿಗಳು, ಮಂಡ್ಯ ಜಿಲ್ಲೆಯ ಉನ್ನತ ಹಾಗೂ ಎಲ್ಲಾ ಶ್ರೇಣಿಯ ಅಧಿಕಾರಿಗಳು ಉದ್ಯೋಗ ಮೇಳ ಯಶಸ್ಸಿಗೆ ಕೆಲಸ ಮಾಡುತ್ತಿದ್ದು, ಉದ್ಯೋಗ ಅರಸಿ ಬರುವ ಅಭ್ಯರ್ಥಿಗಳಿಗೆ ನಮ್ಮ ಸ್ವಯಂ ಸೇವಕರು, ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಕಂಪನಿಗಳ ಅಧಿಕಾರಿಗಳು ಅಭ್ಯರ್ಥಿಗಳ ವಿವರಗಳನ್ನು ಗಮನಿಸಿದ ನಂತರ ಅವರಿಗೆ ಸೂಕ್ತವಾದ, ಅರ್ಹವಾದ ಹುದ್ದೆಯನ್ನು ನೀಡುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

16 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

3 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

16 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

18 hours ago