ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿತಾಣ ಬಲಮುರಿಯಲ್ಲಿ ಈಜಲು ಹೋಗಿದ್ದ ಯುವಕ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಮೈಸೂರು ಜಿಲ್ಲೆ ಸರಗೂರಿನ ದಿನೇಶ್(24) ಎಂದು ಗುರುತಿಸಲಾಗಿದೆ. ದಿನೇಶ್ ತನ್ನ ಸ್ನೇಹಿತರೊಂದಿಗೆ ಬಲಮುರಿಗೆ ಪ್ರವಾಸಕ್ಕೆ ಬಂದಿದ್ದು, ನದಿಯಲ್ಲಿ ಈಜುತ್ತಿದ್ದ ವೇಳೆ ಆಳವಾದ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:-ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಸೆಂಟರ್ ಮೇಲೆ ದಾಳಿ: ಡಾ.ಪಿ.ಸಿ.ಕುಮಾರಸ್ವಾಮಿ ಹೇಳಿದ್ದಿಷ್ಟು.!
ಘಟನಾ ಸ್ಥಳಕ್ಕೆ ಕೆಆರ್‌ಎಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಸೇರಿ ಶವವನ್ನು ಪತ್ತೆಹಚ್ಚಿ ಶವಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





