ಮಂಡ್ಯ : ತಾಲೂಕಿನ ಶಿವಳ್ಳಿಯಿಂದ ಪಾಂಡವಪುರಕ್ಕೆ ಹೋಗುವ ಮಾರ್ಗ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದು ಸುಮಾರು 30 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಬಸ್ ಚಲಿಸುವಾಗ ಎದುರಿಗೆ ಬಂದ ಕಾರಿಗೆ ಜಾಗ ಬಿಡಲು ಎಡಕ್ಕೆ ತಿರುಗಿದಾಗ ಬಸ್ ನಿಯಂತ್ರಣಕ್ಕೆ ಸಿಗದೇ ರಸ್ತೆ ಪಕ್ಕದಲ್ಲಿದ್ದ ಜಮೀನಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಪ್ರಯಾಣಿಕರಿಗೆ ಯಾವುದೇ ಗಂಭೀರ ಗಾಯಾಗಳಾಗಿಲ್ಲ, ಸಣ್ಣ ಪುಟ್ಟ ಗಾಯಗಳಾಗಿದೆ. ಶಿವಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರಮ ಕೈಗೊಂಡಿದ್ದಾರೆ.