ಮಂಡ್ಯ: ಜಿಲ್ಲೆಯಾದ್ಯಂತ 45 ಹೋಬಳಿಗಳಲ್ಲಿ ನಾಡಕಚೇರಿಗೆ ಬರುವ ಅರ್ಜಿಗಳನ್ನು ತೀವ್ರವಾಗಿ ವಿಲೇವಾರಿ ಮಾಡಿ ಉತ್ತಮ ಸೇವೆ ಸಲ್ಲಿಸಿದ ನುರಿತ ಅಧಿಕಾರಿಗಳನ್ನು ಬುಧವಾರ ಜಿಲ್ಲಾಧಿಕಾರಿ ಡಾ. ಕುಮಾರ ಸನ್ಮಾನಿಸಿ ಅಭಿನಂದಿಸಿದರು.
ಮಳವಳ್ಳಿ ತಾಲ್ಲೂಕಿನ ಬಂಡೂರು ನಾಡಕಛೇರಿಯ ಉಪ ತಹಶೀಲ್ದಾರ್ ತ್ಯಾಗರಾಜ, ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ನಾಡಕಛೇರಿಯ ಉಪ ತಹಶೀಲ್ದಾರ್ ವರುಣ್, ನಾಗಮಂಗಲ ತಾಲ್ಲೂಕಿನ ಹೊಣಕೆರೆ ನಾಡಕಛೇರಿಯ ಉಪ ತಹಶೀಲ್ದಾರ್ ಪ್ರಸನ್ನ ಅವರನ್ನು ಸನ್ಮಾನಿಸಿದರು.
ಅಕ್ಟೋಬರ್ ಹಾಗೂ ನವೆಂಬರ್ ಮಾಹೆಯಲ್ಲಿ ತಮ್ಮ ಕಚೇರಿಗೆ ಬಂದ ಅರ್ಜಿಗಳನ್ನು ತೀವ್ರವಾಗಿ ವಿಲೇವಾರಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿಯಲ್ಲಿ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಹೆಚ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.