Categories: ಮಂಡ್ಯ

ಮಂಡ್ಯ: ನಾಡಕಚೇರಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸನ್ಮಾನ

ಮಂಡ್ಯ: ಜಿಲ್ಲೆಯಾದ್ಯಂತ 45 ಹೋಬಳಿಗಳಲ್ಲಿ ನಾಡಕಚೇರಿಗೆ ಬರುವ ಅರ್ಜಿಗಳನ್ನು ತೀವ್ರವಾಗಿ ವಿಲೇವಾರಿ ಮಾಡಿ ಉತ್ತಮ ಸೇವೆ ಸಲ್ಲಿಸಿದ ನುರಿತ ಅಧಿಕಾರಿಗಳನ್ನು ಬುಧವಾರ ಜಿಲ್ಲಾಧಿಕಾರಿ ಡಾ. ಕುಮಾರ ಸನ್ಮಾನಿಸಿ ಅಭಿನಂದಿಸಿದರು.

ಮಳವಳ್ಳಿ ತಾಲ್ಲೂಕಿನ ಬಂಡೂರು ನಾಡಕಛೇರಿಯ ಉಪ ತಹಶೀಲ್ದಾರ್ ತ್ಯಾಗರಾಜ, ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ನಾಡಕಛೇರಿಯ ಉಪ ತಹಶೀಲ್ದಾರ್ ವರುಣ್, ನಾಗಮಂಗಲ ತಾಲ್ಲೂಕಿನ ಹೊಣಕೆರೆ ನಾಡಕಛೇರಿಯ ಉಪ ತಹಶೀಲ್ದಾರ್ ಪ್ರಸನ್ನ ಅವರನ್ನು ಸನ್ಮಾನಿಸಿದರು.

ಅಕ್ಟೋಬರ್ ಹಾಗೂ ನವೆಂಬರ್ ಮಾಹೆಯಲ್ಲಿ ತಮ್ಮ ಕಚೇರಿಗೆ ಬಂದ ಅರ್ಜಿಗಳನ್ನು ತೀವ್ರವಾಗಿ ವಿಲೇವಾರಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿಯಲ್ಲಿ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಹೆಚ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಆಹಾರ ಮೇಳ: 100 ಮಳಿಗೆಗೆ 587 ಅರ್ಜಿ!

ಕೇಶವ ಎಂ. ರಾಜ್ಯದ ೩೦ ಜಿಲ್ಲೆಗಳಿಂದಲೂ ಅರ್ಜಿ ಸಲ್ಲಿಕೆ; ಲಾಟರಿ ಎತ್ತುವ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಇಲ್ಲ; ಉದ್ಯಮಿಗಳ ಆಕ್ಷೇಪ ಮೈಸೂರು:…

13 mins ago

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

20 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

20 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

20 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

21 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

22 hours ago