ಮಂಡ್ಯ: ಜಿಲ್ಲೆಯ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಆರೋಗ್ಯ ಅಭಿಯಾನಕ್ಕೆ ಆದ್ಯತೆ ನೀಡಿದ್ದು, ಕ್ಷಯ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಆರೋಗ್ಯ ಇಲಾಖೆಯು ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಲೋಗೋ ವನ್ನು ಹೂವಿನಲ್ಲಿ ಅರಳಿಸಿದೆ.
ಪುಷ್ಪಗಳಿಂದ ಅಲಂಕೃತ ಗೊಂಡಿರುವ ಕಾರ್ಯಕ್ರಮದ Logo ವನ್ನು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯ ಸ್ವಾಮಿರವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಂಡ್ಯ ತಾಲ್ಲೂಕು ಶಾಸಕರಾದ ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗ ಡಾ. ಕೆ ಮೋಹನ್ , ಜಿಲ್ಲಾ ಕ್ಷಯ ರೋಗ ನಿರ್ಮೂಲನ ಅಧಿಕಾರಿ ಡಾ. ಆಶಾಲತಾ ಹಾಗೂ ವಿವಿಧ ಇಲಾಖೆಯ ಅಧಿಕಾರಿ ವೃಂದದವರು ಹಾಜರಿದ್ದರು.