Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

ಗಣೇಶ ವಿಸರ್ಜನೆ ವೇಳೆ ಗಲಾಟೆ ಬಗ್ಗೆ ಸಚಿವ ಚಲುವರಾಯಸ್ವಾಮಿ ರಿಯಾಕ್ಷನ್‌

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 ಸೆಕ್ಷನ್‌ ಕೂಡ ಜಾರಿಯಲ್ಲಿದೆ. ಯಾವುದೇ ಆಸ್ತಿ-ಪಾಸ್ತಿ ನಷ್ಟ ಹಾಗೂ ಪ್ರಾಣಹಾನಿಯಾಗದಂತೆ ನೋಡಿಕೊಳ್ಳಿ. ಪರಿಸ್ಥಿತಿ ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದೇವೆ. ಆ ಕೆಲಸ ಆಗುತ್ತಿದೆ ಎಂದರು.

ಬೇರೆ ಬೇರೆ ಕಾರಣಕ್ಕೆ ಹಿಂದೂ-ಮುಸ್ಲಿಂ ಗಲಾಟೆ ಆಗಿತ್ತು. ಈ ರೀತಿ ಘಟನೆ ಆಗಿರಲಿಲ್ಲ. ದುರಾದೃಷ್ಟವಶಾತ್‌ ಈ ಘಟನೆ ಆಗಿದೆ. ಪ್ರಕರಣ ನಿಯಂತ್ರಣಕ್ಕೆ ತರುವ ಕೆಲಸ ಆಗುತ್ತಿದೆ. ಯಾವುದೇ ಅನಾಹುತ ಆಗದಂತೆ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಕ್ರಮ ವಹಿಸಿದೆ ಎಂದರು.

 

Tags: