ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 ಸೆಕ್ಷನ್ ಕೂಡ ಜಾರಿಯಲ್ಲಿದೆ. ಯಾವುದೇ ಆಸ್ತಿ-ಪಾಸ್ತಿ ನಷ್ಟ ಹಾಗೂ ಪ್ರಾಣಹಾನಿಯಾಗದಂತೆ ನೋಡಿಕೊಳ್ಳಿ. ಪರಿಸ್ಥಿತಿ ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದೇವೆ. ಆ ಕೆಲಸ ಆಗುತ್ತಿದೆ ಎಂದರು.
ಬೇರೆ ಬೇರೆ ಕಾರಣಕ್ಕೆ ಹಿಂದೂ-ಮುಸ್ಲಿಂ ಗಲಾಟೆ ಆಗಿತ್ತು. ಈ ರೀತಿ ಘಟನೆ ಆಗಿರಲಿಲ್ಲ. ದುರಾದೃಷ್ಟವಶಾತ್ ಈ ಘಟನೆ ಆಗಿದೆ. ಪ್ರಕರಣ ನಿಯಂತ್ರಣಕ್ಕೆ ತರುವ ಕೆಲಸ ಆಗುತ್ತಿದೆ. ಯಾವುದೇ ಅನಾಹುತ ಆಗದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕ್ರಮ ವಹಿಸಿದೆ ಎಂದರು.
ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…
ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್ಮಸ್ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್ ಅಪಘಾತ ಇಡೀ…
ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…
ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…