ಮಂಡ್ಯ

ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರುವುದರಿಂದ ಈ ಘಟನೆ ನಡೆದಿದೆ: ಮಂಡ್ಯ ಗಣೇಶ ವಿಸರ್ಜನೆ ಗಲಾಟೆಗೆ ಕುಮಾರಸ್ವಾಮಿ ಬೇಸರ

ಮಂಡ್ಯ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರುವುದರಿಂದ ಈ ರೀತಿಯ ಉದ್ಧಟತನ ಪ್ರಾರಂಭವಾಗಿದೆ ಎಂದು ಮಂಡ್ಯದಲ್ಲಿ ಗಣೇಶ ವಿಸರ್ಜನೆ ಗಲಾಟೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಗಲಾಟೆ ಸಂಬಂಧ ಎಸ್‌ಪಿ ಜೊತೆ ಮಾತನಾಡಿದ್ದೇನೆ. ನಿನ್ನೆ ಸಾಯಂಕಾಲ ನಡೆದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಆಗಿದೆ. ಇದು ಉಉಲ್ಬಣ ಆಗದಂತೆ ನೋಡಿಕೊಳ್ಳಿ. ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ನಾನು ದೆಹಲಿಯಿಂದ ಬಂದ ತಕ್ಷಣ ಸ್ಥಳ ಪರಿಶೀಲನೆ ಮಾಡುತ್ತೇನೆ. ಇದನ್ನು ಇಲ್ಲಿಗೆ ನಿಲ್ಲಿಸುವುದು ಒಳ್ಳೆಯದು. ಬೇರೆ ರೀತಿಯಲ್ಲಿ ತೆಗೆದುಕೊಂಡು ಹೋಗಿ ಜನರಲ್ಲಿ ಅಶಾಂತಿ ಉಂಟು ಮಾಡಬಾರದು. ಅಮಾಯಕರ ಸಾವು-ನೋವಾಗಬಾರದು ಎಂದು ಎರಡೂ ಗುಂಪುಗಳಲ್ಲಿ ನಾನು ಮನವಿ ಮಾಡುತ್ತೇನೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸರ್ಕಾರ ಒಂದು ಗುಂಪನ್ನು ಓಲೈಸಿಕೊಂಡು ಹೋಗುವ ಕೆಲಸ ಮಾಡುತ್ತಿದೆ. ಆದ್ದರಿಂದಲೇ ಪದೇ ಪದೇ ಈ ಘಟನೆ ನಡೆಯುತ್ತಿದೆ. ಇಂತಹ ಘಟನೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳಿಂದ ಅಮಾಯಕರು ತೊಂದರೆಗೆ ಒಳಗಾಗುತ್ತಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago