ಮಂಡ್ಯ

ಮಂಡ್ಯ| ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

ಮಳವಳ್ಳಿ: ಸಾಲಬಾಧೆ ತಾಳಲಾರದೇ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕೆಂಪನದೊಡ್ಡಿಯಲ್ಲಿ ನಡೆದಿದೆ.

ರೈತ ರಾಮಲಿಂಗಯ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಯತ್ನಿಸಿದ್ದ ರೈತ ರಾಮಲಿಂಗಯ್ಯ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕಳೆದ ತಡರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇದನ್ನು ಓದಿ: ರೈತರ ಆತ್ಮಹತ್ಯೆ : ಪರಿಹಾರ ವಿಳಂಬಕ್ಕೆ ಸಿಎಂ ಗರಂ

ಕಾಳಿಕಂಪನ ದೊಡ್ಡಿಯಲ್ಲಿ ಮೂರು ಎಕರೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆದಿದ್ದ ರೈತ ರಾಮಲಿಂಗಯ್ಯ ಅವರು, ಬಾಳೆಯಲ್ಲಿ ಸರಿಯಾದ ಬೆಲೆ ಸಿಗದೆ ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಸಾಲಗಾರರ ಕಾಟ ತಡೆಯಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ರೈತ ರಾಮಲಿಂಗಯ್ಯ ಅವರು, ಪತ್ನಿ ಸೌಮ್ಯ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

10 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

25 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

56 mins ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

2 hours ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

3 hours ago