ಮಳವಳ್ಳಿ: ಸಾಲಬಾಧೆ ತಾಳಲಾರದೇ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕೆಂಪನದೊಡ್ಡಿಯಲ್ಲಿ ನಡೆದಿದೆ.
ರೈತ ರಾಮಲಿಂಗಯ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಯತ್ನಿಸಿದ್ದ ರೈತ ರಾಮಲಿಂಗಯ್ಯ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕಳೆದ ತಡರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇದನ್ನು ಓದಿ: ರೈತರ ಆತ್ಮಹತ್ಯೆ : ಪರಿಹಾರ ವಿಳಂಬಕ್ಕೆ ಸಿಎಂ ಗರಂ
ಕಾಳಿಕಂಪನ ದೊಡ್ಡಿಯಲ್ಲಿ ಮೂರು ಎಕರೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆದಿದ್ದ ರೈತ ರಾಮಲಿಂಗಯ್ಯ ಅವರು, ಬಾಳೆಯಲ್ಲಿ ಸರಿಯಾದ ಬೆಲೆ ಸಿಗದೆ ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಸಾಲಗಾರರ ಕಾಟ ತಡೆಯಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ರೈತ ರಾಮಲಿಂಗಯ್ಯ ಅವರು, ಪತ್ನಿ ಸೌಮ್ಯ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…