ಮಂಡ್ಯ

ಮಂಡ್ಯ: ಜಿಲ್ಲೆಯ ರೈತರು ಶಿಫಾರಸ್ಸು ಮಾಡಿದ ತಳಿಗಳನ್ನು ಬಳಸಿ

ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯದಿಂದ ಕೃಷಿ ಬೆಳೆಗಳಿಗೆ ನೀರು ಬಿಡಲಾಗುತ್ತಿದ್ದು. ರೈತರಿಗೆ ಅವಶ್ಯಕತೆ ಇರುವ ಚಿತ್ತನೆ ಬೀಜಗಳನ್ನು (ಭತ್ತ, ರಾಗಿ. ದ್ವಿದಳಧಾನ್ಯ ಹಾಗೂ ಇತರೆ) ರೈತ ಸಂಪರ್ಕ ಕೇಂದ್ರ, ಸಹಕಾರ ಸಂಘ ಹಾಗೂ ಎಫ್.ಪಿ.ಓ. ಗಳ ಮುಖಾಂತರ ಸಹಾಯಧನದಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ ಮತ್ತು ಖಾಸಗಿ ಬಿತ್ತನೆ ಬೀಜ ಮಾರಾಟಗಾರರಿಂದ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತಿದ್ದು, ರೈತರು ಜಿಲ್ಲೆಗೆ ಶಿಫಾರಸ್ಸು ಮಾಡಲಾದ ತಳಿಗಳನ್ನು ಮಾತ್ರ ಬಳಕೆ ಮಾಡಬೇಕಾಗಿ ಮಂಡ್ಯ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಭತ್ತದ ಉತ್ಪಾದನೆ ಹೆಚ್ಚಿಸಲು ಸುಧಾರಿತ ಬೇಸಾಯ ಕ್ರಮ
ಕೃಷಿ ಇಲಾಖೆ ವತಿಯಿಂದ “ಭತ್ತದ ಉತ್ಪಾದನೆ ಹೆಚ್ಚಿಸಲು ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರ ಮಾರಾಟಗಾರರಿಗೆ ತರಬೇತಿಯನ್ನು ನೀಡಲಾಗಿದ್ದು, ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು, ಕೃಷಿ ವಿದ್ಯಾಲಯದ ವಿಜ್ಞಾನಿಗಳು ಹಾಗೂ ಕೃಷಿ ಪರಿಕರ ಮಾರಾಟಗಾರರಿಂದ ಭತ್ತದ ಬೆಳೆಯಲ್ಲಿ ಉತ್ಪಾದಕತೆ ಹೆಚ್ಚಿಸಲು ತಾಂತ್ರಿಕ ಮಾಹಿತಿಯನ್ನು ಪಡೆಯಬೇಕು.

ಸುಧಾರಿತ ಬೇಸಾಯ ಪದ್ಧತಿಗಳು

ಯಾಂತ್ರೀಕೃತ ಭತ್ತದ ಸಾಲು ಬೇಸಾಯ ಪದ್ದತಿ, ಶ್ರೀ ಪದ್ದತಿಯಲ್ಲಿ ಭತ್ತದ ಬೇಸಾಯ, ಡ್ರಮ್ ಸೀಡರ್‌ನಿಂದ ಭತ್ತದ ನೇರ ಬಿತ್ತನೆ ಹಾಗೂ ಕೂರಿಗೆಯಿಂದ ನೇರ ಬಿತ್ತನೆ ಪದ್ಧತಿಯನ್ನು ಅಳವಡಿಸಿಕೊಳ್ಳಬಹುದು.

ಸಮಗ್ರ ಪೋಷಕಾಂಶಗಳ ನಿರ್ವಹಣೆ

ಮುಖ್ಯ ಭೂಮಿ ಸಿದ್ದತೆ ಸಂದರ್ಭದಲ್ಲಿ ಪ್ರತಿ ಎಕರೆಗೆ 4 ಟನ್ ಕಾಂಪೋಸ್ಟ್ / ಕೊಟ್ಟಿಗೆ ಗೊಬ್ಬರ ಮತ್ತು 8 ಕೆ.ಜಿ ಸತುವಿನ ಸಲ್ವೇಟ್, ಲಘು ಪೋಷಕಾಂಶವನ್ನು ಮಣ್ಣಿಗೆ ಸೇರಿಸುವುದು ಹಾಗೂ ಭತ್ತದ ಬೆಳೆಗೆ ಶಿಫಾರಸ್ಸು ಮಾಡಲಾದ ಪ್ರಮಾಣದಲ್ಲಿ ವಿವಿಧ ಹಂತಗಳಲ್ಲಿ ರಸಗೊಬ್ಬರವನ್ನು ಎಕರೆಗೆ ಸಾರಜನಕ (40) : ರಂಜಕ (20) : ಬೊಟ್ಯಾಷ್ (20) ಮಾತ್ರ ಬಳಕೆ ಮಾಡಬೇಕು.

ಜೈವಿಕ ಗೊಬ್ಬರ ಬಳಕೆ
800 ಗ್ರಾಂ ಅಜೋಸ್ಪೆರಿಲ್ಲಂ ಅನ್ನು 25 ಕೆ.ಜಿ ಚೆನ್ನಾಗಿ ಕಳಿತ ಕಾಂಪೋಸ್ಟ್ ಗೊಬ್ಬರದ ಜೊತೆ ಬೆರೆಸಿಮುಖ್ಯ ಭೂಮಿಗೆ ನಾಟಿಗೆ ಮುಂಚೆ ಎರಚಿ ಉಳುಮೆ ಮಾಡುವುದು. 800 ಗ್ರಾಂ (ಪಿ.ಎಸ್.ಬಿ) ರಂಜಕ ಕರಗಿಸುವ ಜೀವಾಣು ಗೊಬ್ಬರವನ್ನು 4 ಕೆ.ಜಿ ಕೊಟ್ಟಿಗೆ ಗೊಬ್ಬರ ಹಾಗೂ 4 ಕೆ.ಜಿ ಮಣ್ಣಿನೊಡನೆ ಬೆರೆಸಿ ಪ್ರತಿ ಎಕರೆಗೆ ಭತ್ತ ನಾಟಿ ಮಾಡಿದ 6-8 ನೇ ದಿನಗಳಲ್ಲಿ ಎರಚುವುದರಿಂದ ಬೆಳೆಗಳಿಗೆ ನೇರವಾಗಿ ಸಾರಜನಕ, ರಂಜಕ, ಪೊಟ್ಯಾಷ್ ಹಾಗೂ ಇತರೆ ಲಘು ಪೋಷಕಾಂಶಗಳು ಲಭ್ಯವಾಗುವುದು ಹಾಗೂ ಸಾರಜನಕವನ್ನು ಭೂಮಿಯಲ್ಲಿ ಹೆಚ್ಚು ಹಿಡಿದಿಟ್ಟುಕೊಂಡು ನಿಧಾನವಾಗಿ ಸಸ್ಯಗಳಲ್ಲಿ ಬಿಡುಗಡೆಯಾಗುವಂತೆ ಮಾಡಲು ನ್ಯಾನೋ ಯೂರಿಯಾ ಬಳಕೆ ಮಾಡಬೇಕು.

ಸುಧಾರಿತ ಬೇಸಾಯ ಕ್ರಮಗಳಾದ ಹೊಸ ತಾಂತ್ರಿಕತೆಗಳ ಉಪಯೋಗ, ಸೂಕ್ತ ತಳಿಗಳ ಆಯ್ಕೆ, ನೀರು ನಿರ್ವಹಣೆ, ಜೈವಿಕ ಗೊಬ್ಬರ ಬಳಕೆ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ಸಮಗ್ರ ಕೀಟ ಹಾಗೂ ರೋಗ ನಿರ್ವಹಣೆ ಮಾಡುವುದರ ಮೂಲಕ ಭತ್ತದಲ್ಲಿ ಉತ್ಪಾದನೆ ಹೆಚ್ಚಿಸಲು ಸೂಕ್ತ ಕ್ರಮ ವಹಿಸಿ ಎಂದು ಮಂಡ್ಯ ಉಪವಿಭಾಗ, ಉಪ ಕೃಷಿ ನಿರ್ದೇಶಕಿ ಮಾಲತಿ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

4 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

5 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

7 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

8 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

9 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

9 hours ago