Mandya | Villagers protest against patchwork on the bridge.
ಮಂಡ್ಯ : ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಸಮೀಪದ ಹಳೇ ಸೇತುವೆಯನ್ನು ಸಮರ್ಪಕವಾಗಿ ದುಸ್ಥಿಪಡಿಸದೆ, ತೇಪೆ ಹಾಕಿ ಕಳಪೆ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಮಂಡ್ಯ-ನಾಗಮಂಗಲ ರಸ್ತೆಯಲ್ಲಿರುವ ಎಚ್.ಕೋಡಿಹಳ್ಳಿ ಫಾರಂನ ತಿರುವಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿದೆ. ಹಿಂದೆ ಪೈಪ್‌ಗಳನ್ನು ಅಳವಡಿಸಿ ಸೇತುವೆ ನಿರ್ಮಿಸಿದ್ದು, ಇದರಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಸುತ್ತಮುತ್ತಲ ಗ್ರಾಮಸ್ಥರು, ರೈತರು ಪರದಾಡುವಂತಾಗಿದೆ ಎಂದು ದೂರಿದರು.
ಮಳೆಗಾಲದಲ್ಲಿ ಪೈಪ್‌ಗೆ ಅಡ್ಡಲಾಗಿ ಕಸ-ಕಡ್ಡಿಗಳು, ಮರದ ಕೊಂಬೆಗಳು ಹಾಗೂ ಇನ್ನಿತರೆ ವಸ್ತುಗಳು ಸಿಕ್ಕಿಹಾಕಿಕೊಂಡು ನೀರು ಸರಾಗವಾಗಿ ಹರಿಯದೆ ಸುತ್ತಮುತ್ತಲ ಜಮೀನುಗಳಿಗೆ ನುಗ್ಗುತ್ತದೆ. ಇದರಿಂದಾಗಿ ರೈತರು ಬೆಳೆದ ಬೆಳೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟವಾಗುತ್ತಿದೆ ಎಂದು ಕಿಡಿಕಾರಿದರು.
ಈ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿ ನಿರ್ವಹಣೆ ಸಂದರ್ಭದಲ್ಲಿ ಹಳೆಯ ಪೈಪ್‌ಗಳನ್ನು ತೆಗೆದು ಹೊಸದಾಗಿ ಸೇತುವೆಯನ್ನೇ ನಿರ್ಮಾಣ ಮಾಡಿ, ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಇಲ್ಲದಿದ್ದಲ್ಲಿ ರೈತರೊಡಗೂಡಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈತ ಮುಖಂಡರಾದ ಮುರಳೀಧರ್, ಭಾನುಪ್ರಕಾಶ್, ಸೊಗಪ್ಪ, ವೆಂಕಟಪ್ಪ, ಪ್ರಕಾಶ, ಚೇತನ, ಚೆನ್ನೇಗೌಡ, ಶಿವಣ್ಣ, ಶ್ರೀಧರ, ಸುರೇಶ್, ವೆಂಕಟೇಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…