chaluvarayaswami
ಮಂಡ್ಯ : ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡುವುದಿಲ್ಲ. ಬಿ.ಜೆ.ಪಿ.-ಜಾ.ದಳ ಸೇರಿದಂತೆ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಖಡಕ್ಕಾಗಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಮದ್ದೂರಿನಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಮದ್ದೂರಿನಲ್ಲಿ ನಡೆದಂತಹ ಗಲಭೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಗುರುವಾರ ಮಳವಳ್ಳಿಯಲ್ಲೂ ಕೂಡ ಬಂದ್ ನಡೆದಿದೆ. ಅಲ್ಲೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗಿತ್ತು ಎಂದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.
ಮದ್ದೂರಿನಲ್ಲಿ ಕಲ್ಲು ತೂರಾಟ ನಡೆಸಿದ ೨೨ ಜನರ ಮೇಲೆ ಎಫ್‌ಐ ಆರ್ ದಾಖಲಿಸಲಾಗಿದೆ. ಅದರ ಹಿಂದೆ ನಡೆದಿರುವ ಘಟನೆಗಳ ಕುರಿತು ತನಿಖೆಯ ನಂತರ ತಿಳಿಸಲಾಗುವುದು. ನಾಗಮಂಗಲ ಗಲಭೆಯಲ್ಲೂ ಕೂಡ ಸಂಬಂಧಪಟ್ಟವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಸ್ತುತ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಓಲೈಕೆ ಪ್ರಶ್ನೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್‌ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…