ಮಂಡ್ಯ

ಮಂಡ್ಯ | ಬಿಸಿ ಊಟ ಯೋಜನೆ ಪರಿಶೀಲಿಸಿದ ಜಿ.ಪಂ ಸಿಇಒ

ಮಂಡ್ಯ : ತಾಲ್ಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಬಿಸಿ ಊಟ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು.
ಮಂಗಳವಾರ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಶಾಲೆಗೆ ಸರಬರಾಜಾಗಿರುವ ಆಹಾರ ಸಾಮಾಗ್ರಿಗಳ ಗುಣಮಟ್ಟ ಪರಿಶೀಲಿಸಿದರು. ಬಿಸಿ ಊಟ ಯೋಜನೆಯಡಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುತ್ತಿರುವ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ದಾಸ್ತಾನು ಪರಿಶೀಲನೆ ವೇಳೆ ಅಕ್ಕಿಯ ಗುಣಮಟ್ಟದಲ್ಲಿ ವ್ಯತ್ಯಾಸವಿದ್ದು, ಈ ಬಗ್ಗೆ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿ ವರದಿ ಸಲ್ಲಿಸಲು ಶಿಕ್ಷಣಾಧಿಕಾರಿ, ಮದ್ಯಾಹ್ನ ಉಪಹಾರ ಯೋಜನೆ ರವರಿಗೆ ಸೂಚಿಸಿದರು.
ಇತ್ತೀಚಿಗೆ ಶಾಲೆಗಳಿಗೆ ಸರಬರಾಜು ಮಾಡಲಾಗಿದ್ದ ತೊಗರಿಬೇಳೆ ಮತ್ತು ಎಣ್ಣೆಯನ್ನು ಪರಿಶೀಲನೆ ನಡೆಸಲಾಯಿತು. ನಿಗದಿತ ಅವಧಿಯೊಳಗೆ ಆಹಾರ ಸಾಮಗ್ರಿ ಗಳನ್ನು ಸರಬರಾಜು ಮಾಡುವಂತೆ ಹಾಗೂ ದಸರಾ ರಜೆಯ ಸಂದರ್ಭದಲ್ಲಿ ಆಹಾರ ಸಾಮಗ್ರಿಗಳು ಹಾಳಾಗದಂತೆ ಎಚ್ಚರ ವಹಿಸಲು SOP ಯಂತೆ ಕ್ರಮ ವಹಿಸಲು ಸೂಚಿಸಿದರು.
ಈ ವೇಳೆ ಶಾಲೆಯಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಶಾಲೆಯಲ್ಲಿನ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯಗೊಳಿಸಿ, ಗೈರು ಹಾಜರಾದ ವಿದ್ಯಾರ್ಥಿಗಳ ಪೋಷಕರಿಗೆ ತಿಳುವಳಿಕೆ ನೀಡಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವನ್ನು ಉತ್ತಮಗೊಳಿಸಿ ಎಂದು ಶಿಕ್ಷಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪದ್ಯಾಯರಾದ ಮೋಹನ್ ಸೇರಿದಂತೆ ಇತರರು ಹಾಜರಿದ್ದರು.
ಆಂದೋಲನ ಡೆಸ್ಕ್

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

9 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

12 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

12 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

12 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

12 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

12 hours ago