ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು 2024-25ನೇ ಶೈಕ್ಷಣಿಕ ಸಾಲಿನ ಶಾಲಾ ತರಗತಿಗಳು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪಾಂಡವಪುರ ತಾಲ್ಲೂಕು ಜಕ್ಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲೆಗಳ ಸ್ವಚ್ಛತೆ, ಶೌಚಾಲಯ, ಕುಡಿಯುವ ನೀರು, ಅಕ್ಷರ ದಾಸೋಹ ಅಡುಗೆ ಮನೆ ಹಾಗೂ ಇನ್ನಿತರೆ ಮೂಲ ಸೌಕರ್ಯಗಳ ಕುರಿತು ಪರಿಶೀಲಿಸಿದರು.
ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿನ ಸವಲತ್ತುಗಳ ಸದುಪಯೋಗ ಪಡೆದುಕೊಂಡು ಜ್ಞಾನಾರ್ಜನೆ ಹೊಂದುವಂತೆ, ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಶ್ರಮಿಸುವಂತೆ ಸಲಹೆ ನೀಡಿದರು. ಶಾಲೆಗಳಿಗೆ ಸಾಮಗ್ರಿ ಖರೀದಿ ಹಾಗೂ ಕಾಮಗಾರಿಗಳ ಅವಶ್ಯವಿದ್ದಲ್ಲಿ ನಿಯಮಾನುಸಾರ ಅಗತ್ಯ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ತರುವಾಯ, ಪಾಂಡವಪುರ ತಾಲ್ಲೂಕು ಬಾಳೆಹತ್ತಿಗುಪ್ಪೆ ಗ್ರಾಮಕ್ಕೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯ ಪೈಪ್ ಲೈನ್ ಕಾಮಗಾರಿಯ ಡೆಪ್ತ ಹಾಗೂ ಸಾಮಾಗ್ರಿಗಳ ಗುಣಮಟ್ಟದ ಬಗ್ಗೆ ಪರಿಶೀಲಿಸಿದರು.