Mango procurement limit extended to 200 quintals.
ಬೆಂಗಳೂರು : ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್‌ನಂತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್‌ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ.
ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ ದಿ:25-06-2025ರಂದು ಆದೇಶ ಹೊರಡಿಸಲಾಗಿತ್ತು.
ಈ ಆದೇಶದನ್ವಯ ಪ್ರತಿ ಎಕರೆಗೆ 20 ಕ್ವಿಂಟಾಲ್‌ನAತೆ ಗರಿಷ್ಟ 5 ಎಕರೆಗೆ 100 ಕ್ವಿಂಟಾಲ್‌ವರೆಗೆ ಮಿತಿಗೊಳಿಸಲಾಗಿತ್ತು ಇದೀಗ ಮಾರ್ಪಾಡು ಆದೇಶದಲ್ಲಿ ಈ ಮಿತಿಯನ್ನು 200 ಕ್ವಿಂಟಾಲ್‌ಗೆ ವಿಸ್ತರಿಸಲಾಗಿದೆ.
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ ಮಾಡಿದ್ದು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…