ಮಂಡ್ಯ : ಹಳೆ ಮೈಸೂರು ಭಾಗದಲ್ಲಿ ಮುಂಗಾರು ಮಳೆ ಕ್ಷೀಣಿಸಿರುವ ಹಿನ್ನೆಲೆ ಬರಗಾಲದ ಮುನ್ಸೂಚನೆಯನ್ನು ಎದುರಿಸುತ್ತಿದೆ. ಈ ಹೊತ್ತಿನಲ್ಲಿ ಮಂಡ್ಯ ಜಿಲ್ಲೆಯ ರೈತರಿಗೆ ಮನ್ಮುಲ್ ಬಿಗ್ ಶಾಕ್ ನೀಡಿದೆ.
ರೈತರಿಂದ ಖರೀದಿ ಮಾಡುವ ಹಾಲಿಗೆ ಲೀಟರ್‌ಗೆ 1.75 ರೂ. ಅನ್ನು ಕಡಿತ ಮಾಡಿದೆ. ಲೀಟರ್ ಹಾಲಿಗೆ 32.25 ರೂ. ಬದಲಿಗೆ 30.50 ರೂ. ಅನ್ನು ಇಂದಿನಿಂದ ನೀಡಲಾಗುತ್ತದೆ ಎಂದು ಮನ್ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮನ್ಮುಲ್ ಒಕ್ಕೂಟದ ಸ್ಥಿತಿಗತಿಯನ್ನು ನೋಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಮೊದಲೇ ಮಳೆ ಇಲ್ಲದೆ ವ್ಯವಸಾಯ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇರುವ ರೈತರು, ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದರು. ಇದೀಗ ಮನ್ಮುಲ್ ತೆಗೆದುಕೊಂಡಿರುವ ನಿರ್ಧಾರ ರೈತರಲ್ಲಿ ಆತಂಕ ಉಂಟುಮಾಡಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…