ಮಂಡ್ಯ: ನೂತನವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯಾಗಿ ಮನೋಜ್ ಕುಮಾರ್ ಮೀನಾ ಅವರು ನೇಮಕವಾಗಿದ್ದು, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯಾಗಿ ಜುಲೈ.21ರಂದು ಕಾರ್ಯಭಾರವನ್ನು ವಹಿಸಿಕೊಂಡಿರುತ್ತಾರೆ.
ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯಾಗಿ ಅವರ ಗಮನ ಸೆಳೆಯಬಹುದಾದ ಎಲ್ಲಾ ರೀತಿಯ ಗೌಪ್ಯ/ಅರೆ ಸರ್ಕಾರಿ/ಸರ್ಕಾರದ ಪತ್ರಗಳು ಹಾಗೂ ಇನ್ನಿತರೆ ಪತ್ರಗಳನ್ನು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುವರ್ಣ ಸೌಧ, ಮಂಡ್ಯ-571 401 ವಿಳಾಸಕ್ಕೆ ಕಳುಹಿಸಿಕೊಡಬೇಕೆಂದು ಕೋರಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ :08232 224750 ಅನ್ನು ಸಂಪರ್ಕಿಸಲು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





