ಮಂಡ್ಯ : ಜಿಲ್ಲೆಯ ಕಾರಾಗೃಹದಲ್ಲಿ ಗಾಂಜಾ ಹಾಗೂ ಮೊಬೈಲ್ ಪೂರೈಕೆ ಜಾಲ ಪತ್ತೆಯಾಗಿದೆ. ಖೈದಿಗೆ ಸಿನಿಮಿಯ ರೀತಿಯಲ್ಲಿ ಗಾಂಜಾ ಹಾಗೂ ಮೊಬೈಲ್‌ಅನ್ನು ತಲುಪಿಸುತ್ತಿದ್ದ ಕಿಲಾಡಿಗಳು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಸಿನಿಮೀಯ ಮಾದರಿ ಐಡಿಯಾಗಳನ್ನು ಬಳಸಿಕೊಂಡು ಜೈಲಿನಲ್ಲಿ ಐಷರಾಮಿ ಜೀವನ ನಡೆಸುತ್ತಿದ್ದ ಖೈದಿಯ ಕಳ್ಳಾಟ ಸಿಸಿಟಿವಿ ಕ್ಯಾಮರಾ ಮೂಲಕ ಬಯಲಾಗಿದೆ. ಜೈಲಿನ ಕಾಂಪೌಂಡ್ ಬಳಿ ಬೈಕ್ ನಲ್ಲಿ ಬಂದಂತಹ ಇಬ್ಬರು ಖದೀಮರು ಪ್ಲಾಸ್ಟಿಕ್ ಸುತ್ತಿದಂತಹ ಬಾಲ್ ಅನ್ನು ಕಾಂಪೌಂಡ್ ಒಳಗಡೆ ಎಸೆದಿದ್ದಾರೆ.
ನಂತರ ಈ ಬಾಲನ್ನು ಖೈದಿ ನಾಗ ಎಂಬಾತ ತೆಗೆದುಕೊಂಡಿದ್ದು ಈ ಎಲ್ಲಾ ಚಲನವಲನಗಳನ್ನು ಜೈಲಾಧಿಕಾರಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಗಮನಿಸಿದ್ದಾರೆ. ನಂತರ ನಾಗನ ಸೆಲ್ ಪರಿಶೀಲನೆ ನಡೆಸಿ ಬಾಲ್ ಓಪನ್ ಮಾಡಿದಾಗ ಹತ್ತು ಗ್ರಾಂ ಗಾಂಜಾ ಮತ್ತು ಒಂದು ಮೊಬೈಲ್ ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…