dhramastala casedhramastala case
ಮಂಡ್ಯ : ಜನರ ಆರಾಧ್ಯ ದೈವ ಶ್ರೀ ಮಂಜುನಾಥಸ್ವಾಮಿ ನೆಲೆಸಿರುವ ಧರ್ಮಸ್ಥಳದ ಬಗ್ಗೆ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಸುಳ್ಳು ಸುದ್ದಿಗಳು ಸಮೂಹ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ಕ್ರಮಕೈಗೊಳ್ಳಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಜಮಾವಣೆಗೊಂಡ ಮಹಿಳೆಯರು ಹಾಗೂ ನೂರಾರು ಭಕ್ತರು, ಜಯಚಾಮರಾಜೇಂದ್ರ ಒಡೆಯರ್ ವೃತ್ತದ ವರೆಗೆ ಮೆರವಣಿಗೆಯಲ್ಲಿ ಸಾಗಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು, ಕೆಲ ಕಿಡಿಗೇಡಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ, ಯಾರೋ ಒಬ್ಬ ಅನಾಮಿಕ ತಾನು ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದನ್ನೇ ನಂಬಿ ಸರ್ಕಾರ ಶೋಧ ನಡೆಸುತ್ತಿದೆ. ಎಸ್‌ಐಟಿ ತನಿಖಾ ತಂಡ ರಚಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಅನಾಮಿಕ ವ್ಯಕ್ತಿ ತೋರಿಸಿದ ೧೬ ಸ್ಥಳಗಳಲ್ಲೂ ಯಾವುದೇ ಶವಗಳಾಗಲಿ, ಅವುಗಳ ಅಸ್ಥಿಪಂಜರವಾಗಲಿ ಸಿಕ್ಕಿಲ್ಲ.
ಇದು ಅನ್ಯಧರ್ಮೀಯರು ಹಿಂದೂ ಧರ್ಮದ ಹೂಡಿರುವ ಕುತಂತ್ರವಾಗಿದ್ದು, ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ಮಾಡಲೆಂದೇ ಅನಾಮಿಕ ವ್ಯಕ್ತಿಯನ್ನು ಸೃಷ್ಟಿಸಲಾಗಿದೆ. ಅಲ್ಲದೆ, ಯೂಟ್ಯೂಬ್‌ನಲ್ಲಿ ಸಮೀರ್ ಎಂಬ ವ್ಯಕ್ತಿ ಧರ್ಮಸ್ಥಳ, ಧರ್ಮಾಧಿಕಾರಿಗಳು ಮತ್ತು ಕುಟುಂಬದ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾನೆ. ಅಲ್ಲದೆ, ಅನಾಮಿಕ ಮುಸುಕುಧಾರಿ ವ್ಯಕ್ತಿಯನ್ನು ಮೊದಲು ತನಿಖೆಗೊಳಪಡಿಸಿ ಸತ್ಯಾಸತ್ಯತೆ ತಿಳಿಯಬೇಕೆಂದು ಆಗ್ರಹಿಸಿದರು.
ಕೆಲವು ವರ್ಷಗಳಿಂದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಎಂ.ಡಿ.ಸಮೀರ್, ಸಂತೋಷ್ ಶೆಟ್ಟಿ, ಟಿ.ಜಯಂತ, ಅಜಯ್, ಅಂಚನ್ ಮತ್ತು ಅವನ ಸಹಚರರು ಸೇರಿಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರ ಹೆಸರಿಗೆ ಕಳಂಕ ತರುವಂತಹ ಕೀಳುಮಟ್ಟದ ಭಾಷೆಯನ್ನು ಉಪಯೋಗಿಸಿ ವಿಡಿಯೋಗಳ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯವನ್ನು ಗುರಿಯಾಗಿಸಿಕೊಂಡು ಯಾವುದೇ ದಾಖಲೆಗಳಿಲ್ಲದೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದರಿಂದ ಶ್ರೀಕ್ಷೇತ್ರದ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇದರಿಂದಾಗಿ ಈಗಾಗಲೇ ಸಮಾಜದಲ್ಲಿ ಎರಡು ಬಣಗಳು ನಿರ್ಮಾಣವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದು ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಯು ಸಮಾಜದಲ್ಲಿ ಉದ್ವಿಗ್ನತೆ ಮತ್ತು ಶಾಂತಿಭಂಗಕ್ಕೆ ಕಾರಣವಾಗಬಹುದಾಗಿದೆ.
ಅನಾಮಿಕ ವ್ಯಕ್ತಿಯೋರ್ವ ನೀಡಿದ ದೂರಿನ ಆಧಾರದಲ್ಲಿ ರಾಜ್ಯ ಸರ್ಕಾರವು ‘ವಿಶೇಷ ತನಿಖಾ ತಂಡ’ವನ್ನು ರಚಿಸಿ ತನಿಖೆ ನಡೆಸುತ್ತಿರುವುದನ್ನು ಶ್ರೀಕ್ಷೇತ್ರದ ಭಕ್ತವೃಂದದವರಾದ ನಾವೆಲ್ಲರೂ ಗೌರವದಿಂದ ಸ್ವಾಗತಿಸುತ್ತೇವೆ. ಆದರೆ, ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀ ಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ತಮ್ಮ ಯೂಟ್ಯೂಬ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಮಾಹಿತಿಗಳನ್ನು ಭಿತ್ತರಿಸಿ ಸಾರ್ವಜನಿಕರಲ್ಲಿ ಗೊಂದಲವನ್ನು ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಜನಜಾಗೃತಿ ವೇದಿಕೆ ಅಧ್ಯಕ್ಷ ನಾಗಮಂಗಲ ಹನುಮಂತು, ತಗ್ಗಹಳ್ಳಿ ವೆಂಕಟೇಶ್, ಕಾರಸವಾಡಿ ಮಹದೇವ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ರವೀಂದ್ರ, ಕಲ್ಲಹಳ್ಳಿ ಆನಂದ ಹಾಗೂ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…