ಮಂಡ್ಯ

ಆಗಸ್ಟ್.05ರಂದು ಮತ ಕಳ್ಳತನ ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್.5ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್.‌5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಪ್ರತಿಭಟನೆಯಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಎಲ್ಲಾ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ.

ಮಂಡ್ಯ ಜಿಲ್ಲೆಯಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಭಾಗವಹಿಸಬೇಕು. ಜಿಲ್ಲೆಯಿಂದ ಕನಿಷ್ಠ 5 ಸಾವಿರ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಸಾಧ್ಯವಾದಷ್ಟು ಯುವಕರು ಭಾಗಿಯಾಗಿ ರಾಷ್ಟ್ರದ ಸ್ಥಿತಿಗತಿಯ ಕುರಿತು ತಿಳಿದುಕೊಳ್ಳಬೇಕು ಎಂದರು.

ಯಾರ್ಲಿಯಲ್ಲಿ ರಾಹುಲ್ ಗಾಂಧಿಯವರು ಮತ ಕಳ್ಳತನದ ಕುರಿತಾಗಿ ಗಂಭೀರ ಚರ್ಚೆ ನಡೆಸಲಿದ್ದಾರೆ. ಮತ ಕಳ್ಳತನದ ಕುರಿತಾಗಿ ದಾಖಲೆಯ ಸಮೇತ ಸತ್ಯ ಬಿಚ್ಚಿಡಲಿದ್ದಾರೆ. ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಚುನಾವಣಾ ಆಯೋಗ ಅದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆಯೂ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದೇವೆ. ಆಗ ಯಾರು ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ. ನಮ್ಮವರು ಸ್ವಲ್ಪ ಉದಾಸೀನ ತೋರಿದ್ದರು. ಚುನಾವಣಾ ಆಯೋಗದಿಂದ ಆಕ್ರಮ ನಡೆಯಲ್ಲ ಎಂಬ ನಂಬಿಕೆ ಇತ್ತು. ಆದರೆ ಈಗ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂದು ಕಂಡು ಬಂದಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

47 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

1 hour ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

1 hour ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago