Massive protest rally against voter fraud on August 5: Minister N. Cheluvarayaswamy.
ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ನಡೆಸಲಾಗುವುದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಶನಿವಾರದಂದು ಜಿಲ್ಲಾ ಪ್ರೆಸ್ ಕ್ಲಬ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ, ಪ್ರತಿಭಟನೆಯಲ್ಲಿ ಸುರ್ಜೇವಾಲ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಸೇರಿ ಎಲ್ಲಾ ಮಂತ್ರಿಗಳು ಶಾಸಕರ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಭಾಗವಹಿಸಬೇಕು, ಜಿಲ್ಲೆಯಿಂದ ಕನಿಷ್ಠ 5 ಸಾವಿರ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಸಾಧ್ಯವಾದಷ್ಟು ಯುವಕರು ಭಾಗಿಯಾಗಿ ರಾಷ್ಟ್ರದ ಸ್ಥಿತಿಗತಿಯ ಕುರಿತು ತಿಳಿದುಕೊಳ್ಳಬೇಕು ಎಂದರು.
ರ‍್ಯಾಲಿಯಲ್ಲಿ ರಾಹುಲ್ ಗಾಂಧಿಯವರು ಮತ ಕಳ್ಳತನದ ಕುರಿತಾಗಿ ಗಂಭೀರ ಚರ್ಚೆ ನಡೆಸಲಿದ್ದಾರೆ. ಮತ ಕಳ್ಳತನದ ಕುರಿತಾಗಿ ದಾಖಲೆಯ ಸಮೇತ ಸತ್ಯ ಬಿಚ್ಚಿಡಲಿದ್ದಾರೆ. ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಚುನಾವಣಾ ಆಯೋಗ ಅದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಈ ಹಿಂದೆಯೂ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದೇವೆ. ಆಗ ಯಾರು ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ. ನಮ್ಮವರು ಸ್ವಲ್ಪ ಊದಾಸಿನಿನ ತೋರಿದ್ದರು, ಚುನಾವಣಾ ಆಯೋಗದಿಂದ ಆಕ್ರಮ ನಡೆಯಲ್ಲ ಎಂಬ ನಂಬಿಕೆ ಇತ್ತು ಆದರೆ ಈಗ ಚುನಾವಣೆಯಲ್ಲಿ ಅಕ್ರವಾಗಿದೆ ಎಂದು ಕಂಡು ಬಂದಿದೆ.
ಚುನಾವಣಾ ಆಯೋಗವನ್ನು ಬಳಸಿಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಪ್ರಜಾಪ್ರಭುತ್ವ ಉಳಿಯಬೇಕು ಎಂದರೆ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದಾಗಿದೆ. ಇ ವಿ ಎಂ ಯಂತ್ರದ ಅನುಮಾನವೇ ಬೇರೆ ಮತಪಟ್ಟಿ ಅಕ್ರಮವೇ ಬೇರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪೂರ್ಣಪ್ರಮಾಣದ ಆತ್ಮಹತ್ಯೆಯನ್ನು ನಿಲ್ಲಿಸಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿಯೇ ನಾವು ಐದು ಗ್ಯಾರಂಟಿಯನ್ನು ಕೊಟ್ಟಿದ್ದೇವೆ. ಇಷ್ಟೇಲ್ಲಾ ಆದರೂ ಆತ್ಮಹತ್ಯೆ ಪ್ರಕರಣಗಳು ಮುಂದುವರೆಯುತ್ತಿವೆ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಆಗುತ್ತಿವೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ ಈ ಕುರಿತು ಪೊಲೀಸರಿಂದ ಒಂದು ತಂಡ ರಚಿಸಿ ತನಿಖೆ ಮಾಡಿಸಿದ್ದೇವೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ಖಾಸಗಿ ಸಂಸ್ಥೆಯಿಂದ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಸ್ತುತ ರೈತ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆ ಆಗಿದೆ ಆದರೆ ಕಡಿಮೆ ಆಗಿರೋದು ಖುಷಿ ತಂದಿಲ್ಲ ರೈತ ಆತ್ಮಹತ್ಯೆ ಸಂಪೂರ್ಣ ನಿಲ್ಲಬೇಕು ಎಂದರು.
ರಾಜ್ಯ ಸರ್ಕಾರಕ್ಕೆ ರಸಗೊಬ್ಬರ ಕಳುಹಿಸುವುದು ಕೇಂದ್ರ ಸರ್ಕಾರ ರಸಗೊಬ್ಬರ ತಯಾರಿಕೆ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕರಾದ ಆರ್.ಅಕೋಶ್ ರವರಿಗೆ ಇದರ ಕುರಿತಾಗಿ ಸಾಮಾನ್ಯ ಜ್ಞಾನ ಇಲ್ಲ. ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ನೀಡಬೇಕಿದ್ದ 1.25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರವನ್ನು ಕೇಂದ್ರ ನೀಡಿಲ್ಲ ಇದರಿಂದ ಸಣ್ಣ ಪ್ರಮಾಣದಲ್ಲಿ ರಸಗೊಬ್ಬರ ವಿತರಣೆಯಲ್ಲಿ ವಿಳಂಬವಾಗಿದೆ ಅಷ್ಟೇ ಎಂದರು.
ಸುದ್ದಿಗೋಷ್ಠಿಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ ಬಂಡಿ ಸಿದ್ದೇಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಕಂಪನಿ ಅಧ್ಯಕ್ಷ ಸಿ.ಡಿ. ಗಂಗಾಧರ್, ಜಿಲ್ಲಾ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶುಭ ದಾಯಿನಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಿದಂಬರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…