ಮಂಡ್ಯ

ಮತ ಕಳ್ಳತನ ವಿರುದ್ಧ ಆ.5ಕ್ಕೆ ಬೃಹತ್ ಪ್ರತಿಭಟನಾ ರ‍್ಯಾಲಿ : ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ನಡೆಸಲಾಗುವುದು ಎಂದು ಸಚಿವ ಎನ್.‌ ಚಲುವರಾಯಸ್ವಾಮಿ ಹೇಳಿದರು.

ಶನಿವಾರದಂದು ಜಿಲ್ಲಾ ಪ್ರೆಸ್ ಕ್ಲಬ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ, ಪ್ರತಿಭಟನೆಯಲ್ಲಿ ಸುರ್ಜೇವಾಲ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಸೇರಿ ಎಲ್ಲಾ ಮಂತ್ರಿಗಳು ಶಾಸಕರ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಭಾಗವಹಿಸಬೇಕು, ಜಿಲ್ಲೆಯಿಂದ ಕನಿಷ್ಠ 5 ಸಾವಿರ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಸಾಧ್ಯವಾದಷ್ಟು ಯುವಕರು ಭಾಗಿಯಾಗಿ ರಾಷ್ಟ್ರದ ಸ್ಥಿತಿಗತಿಯ ಕುರಿತು ತಿಳಿದುಕೊಳ್ಳಬೇಕು ಎಂದರು.

ರ‍್ಯಾಲಿಯಲ್ಲಿ ರಾಹುಲ್ ಗಾಂಧಿಯವರು ಮತ ಕಳ್ಳತನದ ಕುರಿತಾಗಿ ಗಂಭೀರ ಚರ್ಚೆ ನಡೆಸಲಿದ್ದಾರೆ. ಮತ ಕಳ್ಳತನದ ಕುರಿತಾಗಿ ದಾಖಲೆಯ ಸಮೇತ ಸತ್ಯ ಬಿಚ್ಚಿಡಲಿದ್ದಾರೆ. ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಚುನಾವಣಾ ಆಯೋಗ ಅದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆಯೂ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದೇವೆ. ಆಗ ಯಾರು ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ. ನಮ್ಮವರು ಸ್ವಲ್ಪ ಊದಾಸಿನಿನ ತೋರಿದ್ದರು, ಚುನಾವಣಾ ಆಯೋಗದಿಂದ ಆಕ್ರಮ ನಡೆಯಲ್ಲ ಎಂಬ ನಂಬಿಕೆ ಇತ್ತು ಆದರೆ ಈಗ ಚುನಾವಣೆಯಲ್ಲಿ ಅಕ್ರವಾಗಿದೆ ಎಂದು ಕಂಡು ಬಂದಿದೆ.

ಚುನಾವಣಾ ಆಯೋಗವನ್ನು ಬಳಸಿಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಪ್ರಜಾಪ್ರಭುತ್ವ ಉಳಿಯಬೇಕು ಎಂದರೆ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದಾಗಿದೆ. ಇ ವಿ ಎಂ ಯಂತ್ರದ ಅನುಮಾನವೇ ಬೇರೆ ಮತಪಟ್ಟಿ ಅಕ್ರಮವೇ ಬೇರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪೂರ್ಣಪ್ರಮಾಣದ ಆತ್ಮಹತ್ಯೆಯನ್ನು ನಿಲ್ಲಿಸಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿಯೇ ನಾವು ಐದು ಗ್ಯಾರಂಟಿಯನ್ನು‌ ಕೊಟ್ಟಿದ್ದೇವೆ‌. ಇಷ್ಟೇಲ್ಲಾ ಆದರೂ ಆತ್ಮಹತ್ಯೆ ಪ್ರಕರಣಗಳು ಮುಂದುವರೆಯುತ್ತಿವೆ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಆಗುತ್ತಿವೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ ಈ ಕುರಿತು ಪೊಲೀಸರಿಂದ ಒಂದು ತಂಡ ರಚಿಸಿ ತನಿಖೆ ಮಾಡಿಸಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ಖಾಸಗಿ ಸಂಸ್ಥೆಯಿಂದ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಸ್ತುತ ರೈತ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆ ಆಗಿದೆ ಆದರೆ ಕಡಿಮೆ ಆಗಿರೋದು ಖುಷಿ ತಂದಿಲ್ಲ ರೈತ ಆತ್ಮಹತ್ಯೆ ಸಂಪೂರ್ಣ ನಿಲ್ಲಬೇಕು ಎಂದರು.

ರಾಜ್ಯ ಸರ್ಕಾರಕ್ಕೆ ರಸಗೊಬ್ಬರ ಕಳುಹಿಸುವುದು ಕೇಂದ್ರ ಸರ್ಕಾರ ರಸಗೊಬ್ಬರ ತಯಾರಿಕೆ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕರಾದ ಆರ್.ಅಕೋಶ್ ರವರಿಗೆ ಇದರ ಕುರಿತಾಗಿ ಸಾಮಾನ್ಯ ಜ್ಞಾನ ಇಲ್ಲ. ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ನೀಡಬೇಕಿದ್ದ 1.25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರವನ್ನು ಕೇಂದ್ರ ನೀಡಿಲ್ಲ ಇದರಿಂದ ಸಣ್ಣ ಪ್ರಮಾಣದಲ್ಲಿ ರಸಗೊಬ್ಬರ ವಿತರಣೆಯಲ್ಲಿ ವಿಳಂಬವಾಗಿದೆ ಅಷ್ಟೇ ಎಂದರು.

ಸುದ್ದಿಗೋಷ್ಠಿಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ ಬಂಡಿ ಸಿದ್ದೇಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಕಂಪನಿ ಅಧ್ಯಕ್ಷ ಸಿ.ಡಿ. ಗಂಗಾಧರ್, ಜಿಲ್ಲಾ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶುಭ ದಾಯಿನಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಿದಂಬರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago