ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಜುಲೈ 31 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ಹೊರಹರಿವು (Out flow) ನೀರನ್ನು ಬಿಡಲಾಗಿದೆ.
ಈ ಪ್ರಮಾಣವೂ ಸುಮಾರು 2,00,000 ಕ್ಯೂಸೆಕ್ಸ್ ಗಿಂತ ಅಧಿಕವಾಗುವ ಸಂಭವವಿರುತ್ತದೆ ಆದ್ದರಿಂದ ಮಂಡ್ಯ, ಮೈಸೂರು, ಮತ್ತು ಚಾಮರಾಜನಗರ ಜಿಲ್ಲೆಯ ಜನರು ಹಾಗೂ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಮುಂಜಾಗ್ರತೆ ಕ್ರಮ ವಹಿಸಿಲು ಜಿಲ್ಲಾಡಳಿತ ಮನವಿ ಮಾಡಿದೆ.
ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಮತ್ತು ಸಂಬಂಧಪಟ್ಟ ಜಿಲ್ಲಾಡಳಿತದ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವಂತೆ ಈ ಮೂಲಕ ಕೋರಲಾಗಿದೆ.
ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇದಿಸುವುದು. ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಿರಲು ಸೂಚಿಸಿದೆ.
ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಆಯಾ ತಾಲ್ಲೂಕು ಆಡಳಿತದ ವತಿಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಂಡಿರುವ ವ್ಯಾಪಕ ಪ್ರಚಾರಗಳನ್ನು ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಗಮನಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧದ ಬೆಟ್ಟಿಂಗ್ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…
ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…
ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…