ಮಂಡ್ಯ

ಎರಡು ಸಮುದಾಯಗಳು ಶಾಂತಿ, ಸೌಹರ್ದತೆ ಕಾಪಾಡಲಿ: ಎನ್‌. ಚಲುವರಾಯಸ್ವಾಮಿ

ಮಂಡ್ಯ: ನಾಗಮಂಗಲದ ವಿವಿಧ ಸಮುದಾಯದ ಯುವಶಕ್ತಿ ಸಮಿತಿ ರಚಿಸಿಕೊಂಡು ಶಾಂತಿ ಹಾಗೂ ಸೌಹರ್ದತೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ  ಅಭಿಪ್ರಾಯ ವ್ಯಕ್ತಪಡಿಸಿದರು.

ಶನಿವಾರ ನಾಗಮಂಗಲ ತಾಲ್ಲೂಕಿನ ಜಯಮ್ಮ ಕೃಷ್ಣಪ್ಪ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ವಿವಿಧ ಸಮುದಾಯದ ಯುವಜನರು ಸಮಿತಿ ರಚಿಸಿಕೊಂಡು ಧಾರ್ಮಿಕ ಕಾರ್ಯಕ್ರಮಗಳು ಮೆರವಣಿಗೆ ನಡೆದ ಸಂದರ್ಭದಲ್ಲಿ ಯಾವುದೇ ಬೀದಿಯಲ್ಲಿ ಸಾಗಿದರೂ ಯಾವುದೇ ಗಲಭೆಯಾಗದಂತೆ ಸೌಹರ್ದತೆ ಮೆರೆಯಬೇಕು. ತಾಲ್ಲೂಕು ಇತರರಿಗೆ ಮಾದರಿಯಾಗಬೇಕು ಎಂದರು.

ನಾಗಮಂಗಲದಲ್ಲಿ ಸೆ.11 ರಂದು ಗಣಪತಿ ಮೆರವಣಿಗೆಯ ಸಂದರ್ಭದಲ್ಲಿ ಉಂಟಾಗ ಗಲಾಟೆ ವೈಯಕ್ತಿಕವಾಗಿ ಅತೀವ ನೋವು ಉಂಟು ಮಾಡಿದೆ. ಘಟನೆ ನಡೆದುಹೋಗಿದೆ ಅದನ್ನು ಪುನ: ಸ್ಮರಿಸುತ್ತ ಅದರ ಸುತ್ತ ಸುತ್ತುವುದು ಬೇಡ ಅದರ ಬದಲಿಗೆ ಶಾಂತ ಚಿತ್ತದಿಂದ ಒಂದಾಗಿ ಎಲ್ಲರೂ ಮುಂದೆ ಸಾಗೋಣ ಎಂದು ಸಲಹೆ ನೀಡಿದರು.

ಗಲಭೆ ಪೂರ್ವನಿಯೋಜಿತ ಅಥವಾ ಅನಿರೀಕ್ಷತವೂ ಎಂಬುದು ತನಿಖೆಯಿಂದ ತಿಳಿದು ಬರಲಿದೆ. ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದೆ ಇದರ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ಸರ್ಕಾರದಿಂದ ಹಾಗೂ ವೈಯಕ್ತಿಕವಾಗಿಯೂ ಸಹ ಪರಿಹಾರ ಒದಗಿಸಿ ಜೀವನ ಕಟ್ಟಿಕೊಳ್ಳಲು ಸಹಕರಿಸಲಾಗುವುದು. ಇದಲ್ಲದೇ ತಾಲ್ಲೂಕಿಗೆ ಭೇಟಿ ನೀಡಿ ಅಂಗಡಿ ಮುಂಗಟ್ಟು ಹಾನಿಯದವರಿಗೆ ಕೆಲವರು ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ ಅವರಿಗೂ ಸಹ ಧನ್ಯವಾದಗಳು ಎಂದು ಹೇಳಿದರು.

ಸೋಮವಾರ ಈದ ಮಿಲಾದ್ ಹಬ್ಬವಿದ್ದು, ಅಂದು ಗಣೇಶ ವಿಸರ್ಜನೆ ಮೆರವಣಿಗೆ ಮಾಡುವುದು ಬೇಡ ಎಂದು ಸಚಿವರು ಮನವಿ ಮಾಡಿದರು.

ಗಲಭೆ ಸೃಷ್ಟಿಸಿದರಿಗೆ ಕಾನೂನು ರೀತಿ ಶಿಕ್ಷೆಯಾಗಲಿದೆ: ಡಿಸಿ ಕುಮಾರ

ಜಿಲ್ಲಾಧಿಕಾರಿ ಡಾ: ಕುಮಾರ  ಮಾತನಾಡಿ ಗಲಭೆ ಉಂಟುಮಾಡಿದವರಿಗೆ ಕಾನೂನು ರೀತಿ ಶಿಕ್ಷೆಯಾಗಲಿದೆ. ಆದರೆ ಈ ಸಣ್ಣ ಪ್ರಕರಣದಿಂದ 25 ಕ್ಕೂ ಹೆಚ್ಚು ಅಂಗಡಿ ಮುಂಗಟ್ಟಿಗೆ ಹಾನಿಯಾಗಿದೆ. ಇವರು ಜೀವನ ಕಟ್ಟಿಕಟ್ಟುಕೊಳ್ಳುವ ರೀತಿ ಹಾಗೂ ಮಾನಸಿಕ ಒತ್ತಡದ ಬಗ್ಗೆ ಚಿಂತಿಸಬೇಕಿದೆ ಎಂದರು.

ಮಾನವೀಯ ಮೌಲ್ಯ ಮತ್ತು ಹೃದಯ ಶ್ರೀಮಂತಿಕೆಯನ್ನು ಭಾವನೆ ಬೆಳೆದರೆ ಇಂತಹ ಘಟನೆಗಳು ಘಟಿಸುವುದಿಲ್ಲ. ಸಹಬಾಳ್ವೆ ಹಾಗೂ ಭಾವೈಕ್ಯತೆಯನ್ನು ಹೆಚ್ಚು ಬೆಳೆಸಿಕೊಳ್ಳಬೇಕು. ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗದಂತೆ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳಬೇಕು. ಸರ್ಕಾರದಿಂದ ನೀಡಲಾಗುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಹೇಳಿದರು.

ಯುವ ಸಮುದಾಯ ಹಾಗೂ ಜನರು ಯಾವುದೇ ವದಂತಿಗಳಿಗೆ ಕಿವಿಕೊಡಬಾರದು. ಅವುಗಳನ್ನು ನಂಬಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸಗಳಿಗೆ ಕೈ ಹಾಕಬಾರದು ಎಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

ನಾಗಮಂಗಲದಲ್ಲಿ ನಡೆದ ಗಲಭೆ ಆಕಸ್ಮಿಕ ಇದನ್ನು ಹತೋಟಿಗೆ ತಂದ ಪೊಲೀಸ್ ಇಲಾಖೆ ಧನ್ಯವಾದಗಳು. ಮೆರವಣಿಗೆ ಅಥವಾ ಯಾವುದೇ ಕಾರ್ಯಕ್ರಮ ನಡೆಯುವಾಗ ಬೇರೆಯವರನ್ನು ಪ್ರಚೋದಿಸಬಾರದು ಹಾಗೂ ಪ್ರಚೋದನೆಗೆ ಒಳಗಾಗಬಾರದು. ಆಗ ಯಾವುದೇ ಗಲಾಟೆ ನಡೆಯುವುದಿಲ್ಲ. ಗೌರಿ, ಗಣೇಶ, ಈದ್ ಮಿಲಾದ್ ಯಾವುದೇ ಹಬ್ಬವಾಗಲಿ ಎಲ್ಲರೂ ಸೇರಿ ಆಚರಿಸೋಣ ಎಲ್ಲಾ ಜನಾಂಗದ ಹಿರಿಯರು ಸೇರಿ ಸಮಿತಿ ರಚಿಸಿಕೊಂಡು ಮಾರ್ಗಸೂಚಿಗಳನ್ನು ರಚಿಸಿಕೊಂಡು ಸಂತೋಷದಿಂದ ಹಬ್ಬಗಳನ್ನು ಆಚರಿಸೋಣ ಎಂದು ಸಲಹೆ ನೀಡಿದರು.

ಗಣಪತಿ ಹಬ್ಬದಲ್ಲಿ 3, 5 ಹಾಗೂ 9 ದಿನಗಳಲ್ಲಿ ವಿಸರ್ಜನೆ ಮಾಡುವುದು ವಾಡಿಕೆ. ಇದಕ್ಕೆ ರೂಟ್ ಮ್ಯಾಪ್ ಮೊದಲೇ ಸಿದ್ಧಪಡಿಸಿಕೊಂಡು ಪೊಲೀಸ್ ಇಲಾಖೆ ಅನುಮತಿ ಪಡೆದುಕೊಳ್ಳಬೇಕು. ಇಲಾಖೆಗಳು ಮಾರ್ಗಸೂಚಿ ಹೊರಡಿಸಿ ಹೆಚ್ಚು ಪ್ರಚಾರ ಕೈಗೊಳ್ಳಬೇಕು.ಇಂತಹ ಅಹಿತಕರ‌ ಘಟನೆ ಕಿಡಿಗೇಡಿಗಳಿಂದ ನಡೆಯುತ್ತದೆ.ಕಿಡಿಗೇಡಿಗಳು ಒಂದು ಜನಾಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ಮನೆಯಲ್ಲಿ‌ ಪೋಷಕರು ಮಕ್ಕಳಿಗೆ ಚಿಕ್ಕಂದಿನಿಂದಲೇ ನೈತಿಕ ಶಿಕ್ಷಣವನ್ನು‌ ನೀಡಿ ಎಲ್ಲರನ್ನೂ ಸತ್ಪ್ರಜೆಯನ್ನಾಗಿ ಮಾಡುವಂತೆ ಸಲಹೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

14 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

15 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

15 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

16 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

20 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

20 hours ago