ಮಂಡ್ಯ

ಬಸವಣ್ಣ ಕೊಟ್ಟಿದ್ದು ಮಾನವೀಯ ಧರ್ಮ: ಸಚಿವ ಎಂ.ಬಿ.ಪಾಟೀಲ್‌

ಮಂಡ್ಯ: ಬಸವಣ್ಣನವರು 12ನೇ ಶತಮಾನದಲ್ಲೇ ಮಾನವೀಯತೆಯನ್ನು ಆಧರಿಸಿದ ಧರ್ಮ ಮತ್ತು ಸಿದ್ಧಾಂತವನ್ನು ಸ್ಥಾಪಿಸಿದ ಮಹಾಪುರುಷರಾಗಿದ್ದಾರೆ. ಅವರು ಜಾತ್ಯಾತೀತ ಮತ್ತು ಸಮಾನತೆಯನ್ನು ಮುನ್ನೆಲೆಗೆ ತಂದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕ ಮತ್ತು ಬಸವ ಸಮಿತಿಯ ಘಟಕಗಳ ವತಿಯಿಂದ ಇಂದು 892ನೇ ಬಸವ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಲಿಂಗಾಯತರ ಜನಸಂಖ್ಯೆ ಶೇಕಡಾ 17ರಷ್ಟಿದೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೂಡ 20 ಲಕ್ಷ ಲಿಂಗಾಯತರಿದ್ದಾರೆ. ನಮ್ಮ ಮಠಗಳು ಜಾತಿಯ ತಾರತಮ್ಯ ಮಾಡದೆ ಎಲ್ಲರಿಗೂ ಆಶ್ರಯ ನೀಡಿವೆ. ಈಗ ನಮ್ಮಲ್ಲೇ ಇರುವ ಉಪಪಂಗಡಗಳ ವ್ಯತ್ಯಾಸಗಳನ್ನು ಮರೆತು ಸಂಘಟನೆ ಮಾಡಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಬಸವಣ್ಣನವರು ಕಾಯಕಕ್ಕೆ ಮಹತ್ವ ನೀಡಿ, ದಮನಿತ ಸಮುದಾಯಗಳನ್ನು ಲಿಂಗಾಯತ ಧರ್ಮಕ್ಕೆ ಸೇರಿಸಿಕೊಂಡರು. ನಾವು ಬಸವಣ್ಣನವರ ತತ್ವವನ್ನು ಸರಿಯಾಗಿ ಅನುಸರಿಸಿದ್ದರೆ ರಾಜ್ಯದ ಅರ್ಧ ಭಾಗದಲ್ಲಿ ಲಿಂಗಾಯತರೇ ಇರುತ್ತಿದ್ದರು ಎಂದು ಅವರು ಪ್ರತಿಪಾದಿಸಿದರು.

ಬಸವಣ್ಣ ಸಂಸ್ಕೃತದ ಪಾರಮ್ಯವನ್ನು ಮರೆತು, ವಚನಗಳ ಮೂಲಕ ದೇವರ ಜತೆ ಕನ್ನಡದಲ್ಲಿ ಮಾತನಾಡಲು ಆರಂಭಿಸಿದರು. ಈಗಲೂ ಬಸವ ಸಂದೇಶವು ಜಾಗತಿಕ ಮಟ್ಟದಲ್ಲಿ ಪ್ರಸಾರ ಆಗಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮಿಗಳು, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಶಾಸಕ ರವಿಕುಮಾರ್ ಗಣಿಗ, ಮಾಜಿ ಸಚಿವ ಸಿ ಎಸ್ ಪುಟ್ಟರಾಜು, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ, ರುದ್ರೇಶ್, ಸಚ್ಚಿದಾನಂದ, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಇಂದಿರೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago