ಮಂಡ್ಯ

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯಿಂದ ಜರುಗಿತು.

ಸಾವಿರಾರು ಭಕ್ತರು ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣಸ್ವಾಮಿಗೆ ವೈರಮುಡಿ (ರತ್ನಕಿರೀಟ) ಧಾರಣೆ ಮಾಡುವ ಅಪೂರ್ವ ದೃಶ್ಯವನ್ನು ಕಣ್ತುಂಬಿಕೊಂಡರು.

ವೈರಮುಡಿ ಉತ್ಸವದ ವಿಶೇಷತೆ ಎಂದರೆ ದೇವರಿಗೆ ಧರಿಸುವ ಅಮೂಲ್ಯ ರತ್ನದಿಂದ ಕೂಡಿದ ವೈರಮುಡಿ ಕಿರೀಟ. ಈ ಕಿರೀಟವನ್ನು ವರ್ಷಕ್ಕೊಮ್ಮೆ ಮಾತ್ರ ದೇವರಿಗೆ ಧರಿಸಲಾಗುತ್ತದೆ.

ದೇವಾಲಯ ಆಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿತ್ತು. ಗುರುವಾರದಿಂದಲೇ ಆರಂಭವಾದ ಬ್ರಹ್ಮೋತ್ಸವದ ಭಾಗವಾಗಿ ಈ ವೈರಮುಡಿ ಮಹೋತ್ಸವ ನಡೆಯಿತು. ಮಹಾರಥೋತ್ಸವ, ಗಜೇಂದ್ರಮೋಕ್ಷ, ಬಂಗಾರದ ಪಲ್ಲಕ್ಕಿ ಉತ್ಸವ ಸೇರಿದಂತೆ ಉತ್ಸವದ ವಿವಿಧ ಕಾರ್ಯಕ್ರಮಗಳು ಮುಂದುವರೆಯುತ್ತಿವೆ.

ಈ ಬಾರಿ ವೈರಮುಡಿ ಬ್ರಹ್ಮೋತ್ಸವದಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದರು. ಸಂಜೆ ವೇಳೆಗೆ ಪಾರ್ಕಿಂಗ್‌ ಸ್ಥಳಗಳೆಲ್ಲಾ ಭರ್ತಿಯಾಗಿದ್ದವು. ಇಷ್ಟು ವರ್ಷಗಳ ಪೈಕಿ ಈ ವರ್ಷ ಮೊದಲ ಬಾರಿಗೆ ದಾಖಲೆ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು ಎಂದು ಉಪವಿಭಾಗಾಧಿಕಾರಿ ಶ್ರೀನಿವಾಸ್‌ ಹೇಳಿದ್ದಾರೆ.

 

ಆಂದೋಲನ ಡೆಸ್ಕ್

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

3 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

3 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

3 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

3 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

3 hours ago