ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯಿಂದ ಜರುಗಿತು.
ಸಾವಿರಾರು ಭಕ್ತರು ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣಸ್ವಾಮಿಗೆ ವೈರಮುಡಿ (ರತ್ನಕಿರೀಟ) ಧಾರಣೆ ಮಾಡುವ ಅಪೂರ್ವ ದೃಶ್ಯವನ್ನು ಕಣ್ತುಂಬಿಕೊಂಡರು.
ವೈರಮುಡಿ ಉತ್ಸವದ ವಿಶೇಷತೆ ಎಂದರೆ ದೇವರಿಗೆ ಧರಿಸುವ ಅಮೂಲ್ಯ ರತ್ನದಿಂದ ಕೂಡಿದ ವೈರಮುಡಿ ಕಿರೀಟ. ಈ ಕಿರೀಟವನ್ನು ವರ್ಷಕ್ಕೊಮ್ಮೆ ಮಾತ್ರ ದೇವರಿಗೆ ಧರಿಸಲಾಗುತ್ತದೆ.
ದೇವಾಲಯ ಆಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿತ್ತು. ಗುರುವಾರದಿಂದಲೇ ಆರಂಭವಾದ ಬ್ರಹ್ಮೋತ್ಸವದ ಭಾಗವಾಗಿ ಈ ವೈರಮುಡಿ ಮಹೋತ್ಸವ ನಡೆಯಿತು. ಮಹಾರಥೋತ್ಸವ, ಗಜೇಂದ್ರಮೋಕ್ಷ, ಬಂಗಾರದ ಪಲ್ಲಕ್ಕಿ ಉತ್ಸವ ಸೇರಿದಂತೆ ಉತ್ಸವದ ವಿವಿಧ ಕಾರ್ಯಕ್ರಮಗಳು ಮುಂದುವರೆಯುತ್ತಿವೆ.
ಈ ಬಾರಿ ವೈರಮುಡಿ ಬ್ರಹ್ಮೋತ್ಸವದಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದರು. ಸಂಜೆ ವೇಳೆಗೆ ಪಾರ್ಕಿಂಗ್ ಸ್ಥಳಗಳೆಲ್ಲಾ ಭರ್ತಿಯಾಗಿದ್ದವು. ಇಷ್ಟು ವರ್ಷಗಳ ಪೈಕಿ ಈ ವರ್ಷ ಮೊದಲ ಬಾರಿಗೆ ದಾಖಲೆ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು ಎಂದು ಉಪವಿಭಾಗಾಧಿಕಾರಿ ಶ್ರೀನಿವಾಸ್ ಹೇಳಿದ್ದಾರೆ.
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…