Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

ಮೇಲುಕೋಟೆ | ನ.9ಕ್ಕೆ ಉಪರಾಷ್ಟ್ರಪತಿ ಆಗಮನ ; ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

ಮಂಡ್ಯ : ಪುರಾಣ ಪ್ರಸಿದ್ಧ ನಗರ ಮೇಲುಕೋಟೆಗೆ ನ.9 ರಂದು ಉಪ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಮೇಲುಕೋಟೆ ಪ್ರವಾಸಿ ಮಂದಿರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರಲ್ಲದೆ, ಅಧಿಕಾರಿಗಳು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಡಿಕೊಂಡಿರುವ ತಯಾರಿ ಬಗ್ಗೆ ವರದಿ ನೀಡುವಂತೆ ತಿಳಿಸಿದರು.

ಮಾರ್ಗಸೂಚಿಯಂತೆ ಅಧಿಕಾರಿಗಳು ಕೆಲಸ ನಿರ್ವಹಣೆ ಮಾಡಬೇಕು. ಪ್ರತಿಯೊಬ್ಬರು ತಮ್ಮ ತಮ್ಮ ಜವಾಬ್ದಾರಿಯನ್ನು ಎಚ್ಚರಿಕೆಯಿಂದ ನಿರ್ವಹಿಸಿ ಎಂದು ತಿಳಿಸಿದರಲ್ಲದೆ, ನಿರಂತರವಾಗಿ ವಿದ್ಯುತ್ ಸಂಪರ್ಕ, ಇಂಟರ್ ನೆಟ್ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಕಾರ್ಯಕ್ರಮದಲ್ಲಿ ಯಾವುದೇ ಲೋಪ ಆಗದಂತೆ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ರಸ್ತೆಗಳ ಅಕ್ಕಪಕ್ಕದಲ್ಲಿ ಸ್ವಚ್ಚತೆಗೆ ಕ್ರಮವಹಿಸಬೇಕು ಸುಸ್ಸಜ್ಜಿತ ಅಂಬುಲೆನ್ಸ್ ನೊಂದಿಗೆ ನುರಿತ ಆರೋಗ್ಯ ಸಿಬ್ಬಂದಿಯನ್ನು ನೇಮಿಸುವಂತೆ ಸೂಚಿಸಿದರಲ್ಲದೆ ಸ್ಥಳದಲ್ಲಿ ಹಸಿರು ಕೊಠಡಿಯಲ್ಲಿ ಗಣ್ಯರಿಗೆ ಬೇಕಾಗುವ ವ್ಯವಸ್ಥೆಯ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನು ಓದಿ: ಮೈಸೂರು | ಫ್ಲೈಓವರ್‌ ನಿರ್ಮಾಣಕ್ಕೆ ಸಂಸದ ಯದುವೀರ್‌ ವಿರೋಧ

ಅಗ್ನಿಶಾಮಕ ದಳ, ಹೆಲಿಪ್ಯಾಡ್ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಶಿಷ್ಟಾಚಾರ ದಂತೆ ಅಗತ್ಯ ಕ್ರಮ ವಹಿಸುವಂತೆ ಹಾಗೂ ವಾಹನಗಳನ್ನು ಇರಿಸಲು ಕ್ರಮವಹಿಸುವಂತೆ ಸೂಚಿಸಿದರು.

ಸಣ್ಣ ಸಣ್ಣ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಸ್ಥಳ ಪರಿಶೀಲನೆ
ಸಭೆಗೂ ಮುನ್ನ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಹೆಲಿಪ್ಯಾಡ್‌ಗೆ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.

ಉಪರಾಷ್ಟ್ರಪತಿಗಳ ಭೇಟಿಯ ಹಿನ್ನಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೈದಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಉದ್ದೇಶಿಸಿರುವ ಸ್ಥಳ ಪರಿಶೀಲಿಸಿದರು.

ಇದನ್ನು ಓದಿ: ಯಾವ ನವೆಂಬರ್‌ ಕ್ರಾಂತಿನೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹೆಲಿಪ್ಯಾಡ್ ನನ್ನು ಅಚ್ಚುಕಟ್ಟಾಗಿ ಸಿದ್ಧಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಲಿಪ್ಯಾಡ್ ನಿಂದ ದೇವಾಲಯಕ್ಕೆ ನೇರವಾಗಿ ಕರೆತಂದು ಪೂರ್ಣಕುಂಭ ಸ್ವಾಗತ ನೀಡಿ ದರ್ಶನಮಾಡಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು.

ಉಪರಾಷ್ಟ್ರಪತಿಗಳು ಬರುವ ರಸ್ತೆಮಾರ್ಗದಲ್ಲಿ ಯಾವುದೇ ಲೋಪವಾಗದಂತೆ ಪೊಲೀಸರು ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಪಾಂಡವಪುರ ಉಪವಿಭಾಗಾಧಿಕಾರಿ ಡಾ.ಶ್ರೀನಿವಾಸ್, ಪಾಂಡವಪುರ ತಹಶೀಲ್ದಾರ್ ಬಸವರೆಡ್ಡಪ್ಪ ರೋಣದ, ಮುಜರಾಯಿ ತಹಶೀಲ್ದಾರ್ ತಮ್ಮೇಗೌಡ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್.ಪಿ ಶಾಂತಮಲ್ಲಪ್ಪ, ಅಧಿಕಾರಿಗಳು ಭಾಗವಹಿಸಿದ್ದರು.

Tags:
error: Content is protected !!