ಮಂಡ್ಯ

ಮೈಕ್ರೋ ಫೈನಾನ್ಸ್ ಗಳು ದಬ್ಬಾಳಿಕೆ ನಡೆಸುವಂತಿಲ್ಲ: ಡಿಸಿ ಎಚ್ಚರಿಕೆ

 ಸಾಲ ವಸೂಲಾತಿ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದಲ್ಲಿ ಕಠಿಣ ಕ್ರಮ: ಡಾ: ಕುಮಾರ

ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ನೀಡಿದ ನಂತರ ಸಾಲದ ಕಂತು ಹಿಂಪಡೆಯಲು ಹೋಗುವ ಸಿಬ್ಬಂದಿಗಳು ಸಭ್ಯವಾಗಿ ವರ್ತಿಸಬೇಕು. ಅವರನ್ನು ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ್‌  ಎಚ್ಚರಿಕೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆಯಲ್ಲಿ ಮಾತನಾಡಿದರು. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆಯುವವರು ಬಡ ಕುಟುಂಬದವರು ಹಾಗೂ ಅವರು ಸಾಲ ಪಡೆಯುವುದು ಕೇವಲ ಒಂದರಿಂದ ಎರಡು ಲಕ್ಷ ಆಗಿರುತ್ತದೆ. ಅವರು ಸಾಲದ ಕಂತು ಪಾವತಿ ಕೇವಲ ಸಾವಿರ ಇರುತ್ತದೆ. ಅವರನ್ನು ಸಾಲ ಮರುಪಾವತಿ ಮಾಡಿಲ್ಲ ಎಂದು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದನಿಂದನೆ ಮಾಡುವುದು, ದಬ್ಬಾಳಿಕೆ ಮಾಡುವುದರಿಂದ ಅವಮಾನಕ್ಕೆ ಒಳಗಾಗಿ ಆತ್ಮಹತ್ಯೆಯಂತಹ ಕೃತ್ಯ ಸಂಭವಿಸುತ್ತಿಸೆ. ಇದು ನಾಗರೀಕ ಸಮಾಜ ತಲೆ ತಗ್ಗಿಸುವ ರೀತಿ ಮಾಡುತ್ತಿದೆ ಎಂದರು.

ಆರ್.ಬಿ.ಐ ನಿಯಮ ಪಾಲಿಸಿ ಆರ್. ಬಿ.ಐ ನಲ್ಲಿ ಸಾಲ ವಸೂಲಾತಿ ಮಾಡಲು ಸಮಯ ನಿಗದಿಯಾಗಿರುತ್ತದೆ. ನಿಗದಿ ಪಡಿಸಿರುವ ಸಮಯದಲ್ಲಿ ಮಾತ್ರ ಸಿಬ್ಬಂದಿಗಳು ಸಾಲದ ಕಂತು ಪಡೆಯಲು ಮನೆಗಳಿಗೆ ತೆರಳಬೇಕು ಎಂದರು.

ಸಾಲದ ಕಂತು ಪಡೆಯಲು ಮನೆಗಳಿಗೆ ಭೇಟಿ ನೀಡಿದಾಗ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಬೇಕು. ಮನೆಯಲ್ಲಿ ನೆಂಟರು ಅಥವಾ ಮಕ್ಕಳ ಮುಂದೆ ಸಾಲದ ಕಂತು ಮರುಪಾವತಿ ಮಾಡಿ ಎಂದು ಕೇಳಿದಾಗ ಸಾರ್ವಜನಿಕವಾಗಿ ಅವಮಾನವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು.

ಸಾಲದ ಮೇಲೆ ವಿಧಿಸುವ ಬಡ್ಡಿಯ ಬಗ್ಗೆ ಮಾಹಿತಿ ನೀಡಬೇಕು ಸಾರ್ವಜನಿಕರಿಗೆ ಸಾಲವನ್ನು ಮಂಜೂರಾತಿ ಮಾಡುವಾಗ ಸಾಲದ ಮೇಲೆ ವಿಧಿಸುವ ಬಡ್ಡಿ, ಪ್ರೊಸೆಸಿಂಗ್ ಶುಲ್ಕದ ಬಗ್ಗೆ ಕನ್ನಡದಲ್ಲಿ ತಿಳಿಸಿ. ಸಾಲ ಮರುಪಾವತಿಗೆ ವಿಧಿಸಿರುವ ಷರತ್ತುಗಳನ್ನು ಕನ್ನಡದಲ್ಲಿ ತಿಳಿಸಬೇಕು ಎಂದು ಸೂಚಿಸಿದರು.

ಸಾಲದ ಕಂತು ಮರುಪಾವತಿ ಮಾಡಲು ತಡ ಮಾಡಿದರೆ ಲಿಖಿತವಾಗಿ ನೊಟೀಸ್ ಜಾರಿ ಮಾಡಿ. ಅವರ ಕಷ್ಟಗಳ ಬಗ್ಗೆ ತಿಳಿದುಕೊಂಡು ಸಮಯಾವಕಾಶ ನೀಡಿ ಎಂದರು.

ದೂರು ಕೇಂದ್ರ ತೆರೆಯಿರಿ

ಮೈಕ್ರೋ ಫೈನಾನ್ಸ್ ಕುರಿತು ಹಲವಾರು ದೂರುಗಳು ಜಿಲ್ಲಾಡಳಿತಕ್ಕೆ ಬರುತ್ತದೆ. ಅವುಗಳನ್ನು ‌ಪರಿಶೀಲಿಸಲು ಜಿಲ್ಲಾ ಮಟ್ಟದಲ್ಲಿ ಒಂದು ದೂರು ಕೇಂದ್ರ ಹಾಗೂ ತಾಲ್ಲೂಕು ಮಟ್ಟದಲ್ಲಿ ಒಬ್ಬರು ನೋಡಲ್ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದರು.

ತರಬೇತಿ ನೀಡಿ ಹಾಗೂ ವರದಿ ಸಲ್ಲಿಸಿ ಜಿಲ್ಲೆಯಲ್ಲಿರುವ ಮೈಕ್ರೋ ಫೈನಾನ್ಸ್ ಗಳು ತಮ್ಮ ಸಿಬ್ಬಂದಿಗಳಿಗೆ ಸಾಲ ವಸೂಲಾತಿ ಮಾಡುವಾಗ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವ ಬಗ್ಗೆ ತರಬೇತಿ ನೀಡಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು ಎಂದರು.

ಮೈಕ್ರೋ ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಗುರುತಿನ ಚೀಟಿ ನೀಡಬೇಕು. ಅವರು ತಮ್ಮ ಸಂಸ್ಥೆಯ ಕಚೇರಿಯ ಮುಂದೆ ನಾಮಫಲಕಗಳನ್ನು ಅಳವಡಿಸಬೇಕು‌ ಎಂದರು.

ಮುಖಂಡರಾದ ವೆಂಕಟಗಿರಿಯಯ್ಯ ಮಾತನಾಡಿ, ಡಿ.ಸಿ.ಸಿ. ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಹಿಳೆಯರಿಗೆ ಸಾಲ ನೀಡಲಾಗುತ್ತದೆ. ಇಲ್ಲಿ ಅವರೇ ಖುದ್ದು ಬ್ಯಾಂಕಿಗೆ ಹೋಗಿ ಸಾಲ ಮರುಪಾವತಿ ಮಾಡುತ್ತಾರೆ. ಇಲ್ಲಿ ಇರುವ ಒಳ್ಳೆಯ ನೀತಿಗಳನ್ನು ಮೈಕ್ರೋ ಫೈನಾನ್ಸ್ ಗಳು ಬಳಸಿಕೊಳ್ಳಬೇಕು ಎಂದರು.

ಸಾಲ ನೀಡುವಾಗ ಅವರಿಗೆ ಮರುಪಾವತಿ ಮಾಡುವ ಶಕ್ತಿಯನ್ನು ಪರಿಶೀಲಿಸದೆ ಸಾಲ ನೀಡುವುದು. 4-5 ಮೈಕ್ರೋ ಫೈನಾನ್ಸ್ ಗಳು ಒಬ್ಬರಿಗೆ ಸಾಲ ನೀಡುವುದು, ನಂತರ ದಬ್ಬಳಿಕೆಯ ಅಸ್ತ್ರ ಪ್ರಯೋಗಿಸುವುದು ಕಂಡುಬರುತ್ತಿದೆ. ಇವುಗಳನ್ನು ಸರಿಪಡಿಸಿಕೊಂಡು ಸಾರ್ವಜನಿಕರಿಗೆ ಸಹಾಯಕವಾಗುವ ರೀತಿ ಕಾರ್ಯನಿರ್ವಹಿಸಿ ಎಂದರು‌.

ಸಭೆಯಲ್ಲಿ ಮಂಡ್ಯ ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್ ಎನ್, ಮೈಕ್ರೋ ಫೈನಾನ್ಸ್ ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಮಂಜುನಾಥ್, ಹೆಗಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…

31 mins ago

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…

1 hour ago

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

2 hours ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

3 hours ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

3 hours ago

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago