ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಣ್ಣೇನಹಳ್ಳಿ ಕೈಗಾರಿಕಾ ಪ್ರದೇಶದ ಬೂಕನಕೆರೆ-ಡಿಂಕಾ-ಅಶೋಕನಗರ ಮಾರ್ಗದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕೆ.ಆರ್.ಪೇಟೆ ತಾಲ್ಲೂಕಿನ ಪಿ.ಬಿ.ಮಂಚನಹಳ್ಳಿ ಗ್ರಾಮದ ನಿವಾಸಿ ಪ್ರಜ್ವಲ್(19) ಮೃತ ಯುವಕನಾಗಿದ್ದಾರೆ. ಅದೇ ಕಾರಿನಲ್ಲಿ ಹೋಗುತ್ತಿದ್ದ ಪ್ರಜ್ವಲ್ ಸಂಬಂಧಿ ಕಾವ್ಯ(26) ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ವಿವರ
ಕಳೆದ ಒಂದು ತಿಂಗಳಿನಿಂದಲೂ ಈ ರಸ್ತೆಯಲ್ಲಿ ರೈತರು ನಿತ್ಯ ರಸ್ತೆಯಲ್ಲಿ ರಾಗಿ ಹುಲ್ಲು ಹಾಕಿ ಒಕ್ಕಣೆ ಮಾಡುತ್ತಿದ್ದರು. ಈ ಬಗ್ಗೆ ಹಲವು ಅಪಘಾತಗಳು ನಡೆದಿದ್ದರೂ ಸಹ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಇರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುವುದು ನಿರಂತರವಾಗಿ ನಡೆಯುತ್ತಿತ್ತು. ಇಂದೂ ಸಹ ಹಲವು ರೈತರು ರಸ್ತೆಯಲ್ಲಿ ರಾಗಿ ಹುಲ್ಲು ಹರಡಿ ಒಕ್ಕಣೆ ಮಾಡುತ್ತಿದ್ದ ಕಾರಣ ಮೃತ ಪ್ರಜ್ವಲ್ ಕಾರನ್ನು ಓಡಿಸಿಕೊಂಡು ಬರುತ್ತಿದ್ದಾಗ, ಚಾಲಕನ ನಿಯಣಂತ್ರಣ ತಪ್ಪಿದ ಕಾರು ಮಗುಚಿ ಬಿದ್ದಿದೆ. ಪರಿಣಾಮ ಪ್ರಜ್ವಲ್ ಅವರಿಗೆ ಗಂಭೀರವಾದ ಗಾಯಗಳುಂಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ರಜ್ವಲ್ ಹತ್ತಿರದ ಸಂಬಂಧಿ ಕಾವ್ಯ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಆನಂದೇಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿ ರಾಗಿ ಒಕ್ಕಣೆ ಮಾಡುತ್ತಿದ್ದ ಹಲವು ರೈತರ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ನಾಳೆಯಿಂದ ಯಾರಾದರೂ ರಸ್ತೆಯಲ್ಲಿ ಒಕ್ಕಣೆ ಮಾಡಿದರೆ ಸಾರ್ವಜನಿಕರು ಮಾಹಿತಿ ನೀಡಿದ್ದಲ್ಲಿ ತಕ್ಷಣ ಒಕ್ಕಣೆ ಮಾಡುವ ರೈತರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಆನಂದೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ ಎಚ್ಚರಿಕೆ ನೀಡಿದ್ದಾರೆ.
ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…
ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…
ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…
ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…