ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ ಯಂತ್ರಗಳಿಂದ ಇಂಧನ ಹಾಕುವ ಪೈಪ್ ಅನ್ ಮಾಡಿ ಇಂಧನವನ್ನು ರಸ್ತೆಗೆ ಹರಿಬಿಟ್ಟಿದ್ದಾರೆ.
ಈ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ.ಪಾಂಡವಪುರ ತಾಲೂಕಿನ ಬೇಬಿ ಹಳ್ಳಿ ಬಳಿಯ ಎನ್. ಜಿ ಪೆಟ್ರೋಲ್ ಬಂಕ್‌ನ್ನು ಕಳೆದ ಶನಿವಾರ ರಾತ್ರಿ ಧ್ವಂಸ ಗೊಳಿಸಿದ್ದು, ಭಾನುವಾರ ಬೆಳಗ್ಗೆ ಸಿಬ್ಬಂದಿಗಳು ಕೆಲಸಕ್ಕೆಂದು ಬಂದಾಗ ಬೆಳಕಿಗೆ ಬಂದಿದೆ.
ಪೆಟ್ರೋಲ್ ಬಂಕ್ ನ ವಿದ್ಯುತ್ ಕೊಠಡಿಗೆ ಹಾಕಲಾಗಿದ್ದ ಬೀಗ ಒಡೆದು, ಸ್ಥಗಿತಗೊಳಿಸಲಾಗಿದ್ದ ಪಂಪ್‌ಗಳನ್ನು ಆನ್ ಮಾಡಲಾಗಿದೆ. ಎರಡೂ ಪಂಪ್‌ಗಳ ಪೆಟ್ರೋಲ್ ಹಾಗೂ ಡೀಸೆಲ್ ಗನ್‌ಗಳನ್ನು ನೆಲಕ್ಕೆ ಹಾಕಿ ಸುಮಾರು 10 ಸಾವಿರ ಲೀಟರ್‌ಗೂ ಅಧಿಕ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ನೆಲಕ್ಕೆ ಹರಿಸಲಾಗಿದೆ. ಅಂದಾಜು 10 ಲಕ್ಷ ರೂ.ಗಳಿಗೂ ಅಧಿಕ ನಷ್ಟ ಉಂಟಾಗುವಂತೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆ.ಆರ್. ಪೇಟೆಯ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಸ್ತಿ ರಂಗಪ್ಪ ಅವರು ಬಿ.ಎನ್.ಜಿ ಪೆಟ್ರೋಲ್ ಬಂಕ್ ಅನ್ನು ಕಳೆದ ಜೂ.29ರಂದು ಪ್ರಾರಂಭಿಸಿದ್ದರು.ಶನಿವಾರ ರಾತ್ರಿ ಕಾವಲಿನಲ್ಲಿದ್ದ ಇಬ್ಬರು ಸಿಬ್ಬಂದಿಗಳು ರಾತ್ರಿ ಊಟಕ್ಕೆಂದು ಸಮೀಪದ ಅರಳಕುಪ್ಪೆ ಗ್ರಾಮಕ್ಕೆ ತೆರಳಿದ್ದರು. ಅದೇ ಸಂದರ್ಭದಲ್ಲಿ ಮಳೆ ಬಂದಿದ್ದರಿಂದಾಗಿ, ಅವರು ಬೇಗನೇ ಪೆಟ್ರೋಲ್ ಬಂಕ್ ಗೆ ಮರಳಲು ಆಗಿರಲಿಲ್ಲ. ಈ ಸಂದರ್ಭವನ್ನು ಗಮನಿಸಿದ ದುಷ್ಕರ್ಮಿಗಳು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಇದೇ ವೇಳೆ ಪಂಪ್, ಶೌಚಾಲಯ ಹಾಗೂ ಸೇಲ್ಸ್ ರೂಮಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.
ಪೆಟ್ರೋಲ್ ಬಂಕ್ ನಲ್ಲಿ ಸಿಸಿ ಕ್ಯಾಮರಾ ಹಾಗೂ ರಾತ್ರಿ ಕಾವಲಿನ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿಯೇ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆಂದು ಹೇಳಲಾಗಿದೆ. ಈ ಕೃತ್ಯದ ಹಿಂದೆ ಕಾರಣ ಏನಿರಬಹುದು ಎಂಬ ಪ್ರಶ್ನೆಯ ಹಿಂದೆ ಬಿದ್ದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆಬೀಸಲಾಗಿದೆ. ಮೇಲ್ನೋಟಕ್ಕೆ, ಇತರ ಪೆಟ್ರೋಲ್ ಬಂಕ್ ನ ಮಾಲೀಕರು ವ್ಯಾಪಾರ ದ್ವೇಷದಿಂದಾಗಿ ಈ ಕೃತ್ಯವನ್ನು ಮಾಡಿಸಿರಬಹುದೇ ಎಂಬ ಅನುಮಾನಗಳೂ ಎದ್ದಿವೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ದುಷ್ಕರ್ಮಿಗಳ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…