ಮಂಡ್ಯ

ಲಕ್ಷಾಂತರ ರೂ. ಮೌಲ್ಯದ ಪೆಟ್ರೋಲ್-ಡೀಸೆಲ್ ಅನ್ನು ನೆಲಕ್ಕೆ ಸುರಿದ ದುಷ್ಕರ್ಮಿಗಳು

ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ ಯಂತ್ರಗಳಿಂದ ಇಂಧನ ಹಾಕುವ ಪೈಪ್ ಅನ್ ಮಾಡಿ ಇಂಧನವನ್ನು ರಸ್ತೆಗೆ ಹರಿಬಿಟ್ಟಿದ್ದಾರೆ.

ಈ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ.ಪಾಂಡವಪುರ ತಾಲೂಕಿನ ಬೇಬಿ ಹಳ್ಳಿ ಬಳಿಯ ಎನ್. ಜಿ ಪೆಟ್ರೋಲ್ ಬಂಕ್‌ನ್ನು ಕಳೆದ ಶನಿವಾರ ರಾತ್ರಿ ಧ್ವಂಸ ಗೊಳಿಸಿದ್ದು, ಭಾನುವಾರ ಬೆಳಗ್ಗೆ ಸಿಬ್ಬಂದಿಗಳು ಕೆಲಸಕ್ಕೆಂದು ಬಂದಾಗ ಬೆಳಕಿಗೆ ಬಂದಿದೆ.

ಪೆಟ್ರೋಲ್ ಬಂಕ್ ನ ವಿದ್ಯುತ್ ಕೊಠಡಿಗೆ ಹಾಕಲಾಗಿದ್ದ ಬೀಗ ಒಡೆದು, ಸ್ಥಗಿತಗೊಳಿಸಲಾಗಿದ್ದ ಪಂಪ್‌ಗಳನ್ನು ಆನ್ ಮಾಡಲಾಗಿದೆ. ಎರಡೂ ಪಂಪ್‌ಗಳ ಪೆಟ್ರೋಲ್ ಹಾಗೂ ಡೀಸೆಲ್ ಗನ್‌ಗಳನ್ನು ನೆಲಕ್ಕೆ ಹಾಕಿ ಸುಮಾರು 10 ಸಾವಿರ ಲೀಟರ್‌ಗೂ ಅಧಿಕ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ನೆಲಕ್ಕೆ ಹರಿಸಲಾಗಿದೆ. ಅಂದಾಜು 10 ಲಕ್ಷ ರೂ.ಗಳಿಗೂ ಅಧಿಕ ನಷ್ಟ ಉಂಟಾಗುವಂತೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆ.ಆರ್. ಪೇಟೆಯ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಸ್ತಿ ರಂಗಪ್ಪ ಅವರು ಬಿ.ಎನ್.ಜಿ ಪೆಟ್ರೋಲ್ ಬಂಕ್ ಅನ್ನು ಕಳೆದ ಜೂ.29ರಂದು ಪ್ರಾರಂಭಿಸಿದ್ದರು.ಶನಿವಾರ ರಾತ್ರಿ ಕಾವಲಿನಲ್ಲಿದ್ದ ಇಬ್ಬರು ಸಿಬ್ಬಂದಿಗಳು ರಾತ್ರಿ ಊಟಕ್ಕೆಂದು ಸಮೀಪದ ಅರಳಕುಪ್ಪೆ ಗ್ರಾಮಕ್ಕೆ ತೆರಳಿದ್ದರು. ಅದೇ ಸಂದರ್ಭದಲ್ಲಿ ಮಳೆ ಬಂದಿದ್ದರಿಂದಾಗಿ, ಅವರು ಬೇಗನೇ ಪೆಟ್ರೋಲ್ ಬಂಕ್ ಗೆ ಮರಳಲು ಆಗಿರಲಿಲ್ಲ. ಈ ಸಂದರ್ಭವನ್ನು ಗಮನಿಸಿದ ದುಷ್ಕರ್ಮಿಗಳು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಇದೇ ವೇಳೆ ಪಂಪ್, ಶೌಚಾಲಯ ಹಾಗೂ ಸೇಲ್ಸ್ ರೂಮಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.

ಪೆಟ್ರೋಲ್ ಬಂಕ್ ನಲ್ಲಿ ಸಿಸಿ ಕ್ಯಾಮರಾ ಹಾಗೂ ರಾತ್ರಿ ಕಾವಲಿನ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿಯೇ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆಂದು ಹೇಳಲಾಗಿದೆ. ಈ ಕೃತ್ಯದ ಹಿಂದೆ ಕಾರಣ ಏನಿರಬಹುದು ಎಂಬ ಪ್ರಶ್ನೆಯ ಹಿಂದೆ ಬಿದ್ದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆಬೀಸಲಾಗಿದೆ. ಮೇಲ್ನೋಟಕ್ಕೆ, ಇತರ ಪೆಟ್ರೋಲ್ ಬಂಕ್ ನ ಮಾಲೀಕರು ವ್ಯಾಪಾರ ದ್ವೇಷದಿಂದಾಗಿ ಈ ಕೃತ್ಯವನ್ನು ಮಾಡಿಸಿರಬಹುದೇ ಎಂಬ ಅನುಮಾನಗಳೂ ಎದ್ದಿವೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ದುಷ್ಕರ್ಮಿಗಳ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ.

lokesh

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

9 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

11 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

14 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

15 hours ago