MIMS Blood Bank Center
ಮಂಡ್ಯ : ರೋಗಿಗಳ ಜೀವ ಉಳಿಸಲು ತುರ್ತಾಗಿ ರಕ್ತ ಬೇಕಿರುತ್ತದೆ. ರಕ್ತನಿಧಿ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ, ರೋಗಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಿಸಬೇಕಾಗಬಹುದು. ರಕ್ತನಿಧಿ ಕೇಂದ್ರದ ಅಧಿಕಾರಿಗಳು ರೋಗಿಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಖಡಕ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಿಮ್ಸ್ ವೈದ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರು ವೈದ್ಯರಿಗೆ ದೇವರ ಸ್ಥಾನ ನೀಡುತ್ತಾರೆ. ವೈದ್ಯರ ಸ್ವ ಪ್ರತಿಷ್ಠೆಯಿಂದ ಮಿಮ್ಸ್‌ನ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಹಾಗೂ ರೋಗಿಗಳಿಗೆ ರಕ್ತ ದೊರಕುತ್ತಿಲ್ಲ. ರಕ್ತ ದಾನ ಶಿಬಿರಗಳು ಜಿಲ್ಲೆಯಲ್ಲಿ ನಡೆಯುತ್ತಿಲ್ಲ ಎಂದರೆ ತಲೆ ತಗ್ಗಿಸಬೇಕಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಈ ಹಿಂದೆ ಹಲವಾರು ರಕ್ತದಾನ ಶಿಬಿರಗಳನ್ನು ಆಯೋಜಿಸಿ ರಕ್ತ ಸಂಗ್ರಹಿಸಿ ಅವಶ್ಯವಿದ್ದಾಗ ಬೇರೆ ಜಿಲ್ಲೆಗೆ ನೀಡಲಾಗಿತ್ತಿತ್ತು. ಇಂದು ಮಿಮ್ಸ್‌ಗೆ ಬರುವ ರೋಗಿಗಳು ಖಾಸಗಿ ರಕ್ತನಿಧಿ ಕೇಂದ್ರದಿಂದ ರಕ್ತ ತರಬೇಕೆಂದರೆ ಬಡವರಿಗೆ ಕಷ್ಟವಾಗುತ್ತದೆ. ಮಿಮ್ಸ್‌ಗೆ ಬರುವ ರೋಗಿಗಳು ಬಡವರು ಎಂಬುದನ್ನು ಮರೆಯಬೇಡಿ. ಮಾನವೀಯತೆ ಹಾಗೂ ಹೃದಯವಂತಿಕೆಯನ್ನು ರೂಢಿಸಿಕೊಂಡು ಕೆಲಸ ನಿರ್ವಹಿಸಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ. ಮಿಮ್ಸ್‌ನ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ರಕ್ತಕ್ಕೆ ಕೃತಕ ಬೇಡಿಕೆ ಸೃಷ್ಟಿಯಾಗಿ ಹಲವಾರು ತೊಂದರೆ ಉಂಟಾಗುತ್ತದೆ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಮಿಮ್ಸ್‌ನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದು ನಿರ್ದೇಶನ ನೀಡಿದರು.
ಮಿಮ್ಸ್ ರಕ್ತನಿಧಿ ಕೇಂದ್ರದಲ್ಲಿ ಉಂಟಾಗಿರುವ ತೊಂದರೆಯನ್ನು ಕೂಡಲೇ ಸರಿದೂಗಿಸಬೇಕು. ಈ ಹಿಂದೆ ರಕ್ತನಿಧಿ ಕೇಂದ್ರ ನಡಯುತ್ತಿದ್ದ ರೀತಿಯಲ್ಲಿ ನಡೆಯಬೇಕು. ಇದಕ್ಕೆ ಸಂಬಂಧಿಸಿದಂತೆ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ ಅವರಿಗೆ ಸೂಚನೆ ನೀಡಿದರು.
ರಕ್ತನಿಧಿ ಕೇಂದ್ರದಲ್ಲಿ ರಕ್ತದ ಯುನಿಟ್‌ಗಳನ್ನು ಹೆಚ್ಚಿಸಲು ರೆಡ್‌ಕ್ರಾಸ್ ಸಂಸ್ಥೆಯೊಂದಿಗೆ ಶಿಬಿರಗಳನ್ನು ಆಯೋಜಿಸಬೇಕು. ಪ್ರತಿದಿನ ರಕ್ತನಿಧಿ ಕೇಂದ್ರದ ಕಾರ್ಯನಿರ್ವಹಣೆಯನ್ನು ನಿಯಮಿತವಾಗಿ ಮಿಮ್ಸ್ ವೈದ್ಯಕೀಯ ಅಧಿಕ್ಷಕ ಡಾ ಶಿವಕುಮಾರ್ ಅವರು ಪರಿಶೀಲನೆ ನಡೆಸಬೇಕು ಎಂದು ಆದೇಶಿಸಿದರು.
ರಕ್ತನಿಧಿ ಕೇಂದ್ರಕ್ಕೆ ಸಂಬಂಧಿಸಿದಂತೆ ದೂರುಗಳು ಕೇಳಿಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೆಡ್‌ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಮಿಮ್ಸ್ ಪೆಥಾಲಜಿ, ರಕ್ತ ನಿಧಿ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…