ಮಂಡ್ಯ: ಇಲ್ಲಿನ ಮಿಮ್ಸ್‌ನಲ್ಲಿ ಹಲವು ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಮೇಜರ್ ಸರ್ಜರಿ ಮಾಡಬೇಕಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಿಮ್ಸ್‌ನಲ್ಲಿ ತುಂಬಾ ಸಮಸ್ಯೆ ಇದೆ. ಹೀಗಾಗಿ ಜಿಲ್ಲಾಧಿಕಾರಿ ಮೂಲಕ ಅಲ್ಲಿರುವ ಸಮಸ್ಯೆಗಳ ಪಟ್ಟಿ ಮಾಡಿಸಲಾಗಿದೆ. ಹಾಗಾಗಿ ಮಿಮ್ಸ್‌ಗೆ ಮೇಜರ್ ಸರ್ಜರಿ ಆಗಬೇಕು. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಶೀಘ್ರದಲ್ಲೇ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.
ಇನ್ನು ರಾಜ್ಯ ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಳೆದ ಬಾರಿಯೂ ಕೃಷಿ ಇಲಾಖೆಗೆ ಹೊಸ ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡಿದ್ದರು. ಈ ಬಾರಿಯೂ ಉತ್ತಮ ಕಾರ್ಯಕ್ರಮಗಳು ಸಿಗುವ ನಿರೀಕ್ಷೆಯಿದೆ ಎಂದರು.