Mysore
15
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಗಣಿಗಾರಿಕೆ ಸ್ಫೋಟದಿಂದ ವಿ.ಸಿ ಸುರಂಗ ಕಾಲುವಿಗೆ ಅಪಾಯ : ಸ್ಥಳ ಪರಿಶೀಲಿಸಿದ ಅಧಿಕಾರಿಗಳು

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನನಕೆರೆ ಮತ್ತು ಆಲಗೂಡು ಗ್ರಾಮಗಳ ನಡುವಿನ ವಿ.ಸಿ.ನಾಲೆ ಸಂಪರ್ಕ ಸುರಂಗ ನಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ತಲೆ ಎತ್ತಿರುವ ಗಣಿಗಾರಿಕೆಗಳ ಸ್ಛೋಟದಿಂದಾಗಿ ಅಪಾಯವಾಗಲಿದೆ ಎಂಬ ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆ ಅಽಕಾರಗಳ ತಂಡ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ನೀರಾವರಿ ನಿಗಮದ ಎಕ್ಸಿಕ್ಯೂಟಿವ್ ಇಂಜಿನಿಯರ್ ವಾಸುದೇವ ನೀಡಿರುವ ದೂರಿನನ್ವಯ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಗಣಿ ಮತ್ತು ಭೂ ವಿಜ್ಞಾನದ ಹಿರಿಯ ಅಽಕಾರಿ ಪುಷ್ಪ ನೇತೃತ್ವದ ತಂಡ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತು.

ಸುರಂಗ ನಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ಕ್ರಷರ್ ಮತ್ತು ಕ್ವಾರಿಗಳ ದಾಖಲಾತಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಕ್ವಾರಿಗಳಲ್ಲಿ ಬ್ಲಾಸ್ಟಿಂಗ್ ನಡೆಸುತ್ತಿರುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಇದನ್ನು ಓದಿ : ಚಾಮರಾಜನಗರ| ಅಕ್ರಮ ಗಣಿಗಾರಿಕೆ ವಿರುದ್ಧ ಅನ್ನದಾತರ ಆಕ್ರೋಶ

ಎಕ್ಸಿಕ್ಯುಟಿವ್ ಇಂಜಿನಿಯರ್ ವಾಸುದೇವ ಮಾತನಾಡಿ, ಈ ಭಾಗದಲ್ಲಿ ಸುಮಾರು ೧.೩ ಕಿ.ಮೀ. ವರೆಗೂ ಸುರಂಗದ ಮೂಲಕವೇ ಹಾದು ಹೋಗುವ ವಿ.ಸಿ. ಸಂಪರ್ಕ ನಾಲೆಯು ಸುಮಾರು ೭೦ ಸಾವಿರ ಎಕರೆ ಪ್ರದೇಶದ ಜಮೀನುಗಳ ಕೃಷಿ ಚಟುವಟಿಕೆಗಳಿಗೆ ಆಧಾರಸ್ತಂಬವಾಗಿದೆ. ಇಲ್ಲಿನ ಕ್ವಾರಿ ಮತ್ತು ಕ್ರಷರ್‌ಗಳಲ್ಲಿ ನಡೆಯುತ್ತಿರುವ ಸ್ಛೋಟದಿಂದ ಸುರಂಗ ಕುಸಿಯುವ ಸಾಧ್ಯತೆಯಿದೆ. ಹಾಗಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ನೀಡಲಾಗಿದ್ದು, ನಾಲೆಯ ರಕ್ಷಣೆಗಾಗಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ ಮಾತನಾಡಿ, ಈ ಭಾಗದಲ್ಲಿ ಪ್ರಭಾವಿಗಳು ಹಾಗೂ ರಾಜಕೀಯ ನಾಯಕರ ಹಿಂಬಾಲಕರು ಕ್ರಷರ್ ಮತ್ತು ಕ್ವಾರಿಗಳನ್ನು ನಡೆಸುತ್ತಿದ್ದು, ಎಗ್ಗಿಲ್ಲದೆ ಬ್ಲಾಸ್ಟಿಂಗ್ ಮಾಡುವ ಮೂಲಕ ಸುರಂಗದ ನಾಲೆಗೆ ಕಂಟಕವಾಗಿದೆ. ಅಽಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ನಾಲೆಯ ಸಂರಕ್ಷಣೆಗೆ ಮುಂದಾಗುವುದರ ಜತೆಗೆ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಸ್ಥಳೀಯರಾದ ಗಂಜಾಂ ರವಿಚಂದ್ರ, ಕಾಳೇನಹಳ್ಳಿ ಮಹೇಶ್, ಕೋಡಿಶೆಟ್ಟಿಪುರ ತೇಜಸ್, ಅಲ್ಲಾಪಟ್ಟಣ ಸಿದ್ದೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Tags:
error: Content is protected !!