ಮಂಡ್ಯ: ನಗರದಲ್ಲಿ 43 ಕೋಟಿ ರೂ ವೆಚ್ಚದಲ್ಲಿ ನಗರದ ಫ್ಯಾಕ್ಟರಿ ಸರ್ಕಲ್ ಹಾಗೂ ಸಂಜಯ್ ಸರ್ಕಲ್ ನಲ್ಲಿ ಹೈಟೆಕ್ ಮಾದರಿ ವೃತ್ತ ನಿರ್ಮಾಣ, ಎನ್‌ಎಚ್-275 ಶ್ರೀನಿವಾಸಪುರ ಗೇಟ್ ನಿಂದ ಇಂಡುವಾಳು ಅಂಡರ್ ಪಾಸ್ ವರೆಗೆ ಮಂಡ್ಯ ನಗರದ ಮಧ್ಯ ಭಾಗದಲ್ಲಿ ವಿಶ್ವ ದರ್ಜೆಯ ರಸ್ತೆ ಹಾಗೂ ಪಾದಾಚಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು 33 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಅಮರಾವತಿ ಹೋಟೆಲ್‌ನಿಂದ ಜ್ಯೋತಿ ಇಂಟರ್ನ್ಯಾಷನಲ್ ಹೋಟೆಲ್ ವರೆಗೆ ಹೈಟೆಕ್ ಪುಟ್‌ಬಾತ್ ಮತ್ತು ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು ಅಣ್ಣೂರಿನ ಮಾಜಿ ವಾಯ್ಸ್ ಚಾನ್ಸಲರ್ ರಾಜೇಂದ್ರ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು.
ಅಧಿಕಾರಕ್ಕೆ ಬಂದ 8 ತಿಂಗಳಲ್ಲಿಯೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಜಿಲ್ಲೆಯ ಜನಸಾಮಾನ್ಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ಶಾಸಕರಾದ ರವಿಕುಮಾರ್, ಉದಯ್ ಹಾಗೂ ರಮೇಶ್ ಬಂಡಿ ಸಿದ್ದೇಗೌಡ ಮೂವರು ನಗರದ ಅಭಿವೃದ್ಧಿಗಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ ಎಂದರು.
ಶಾಸಕ ಪಿ. ರವಿಕುಮಾರ್, ಉದ್ಯಮಿ ವೆಂಕಟರಮಣಗೌಡ( ಸ್ಟಾರ್ ಚಂದ್ರು) ಸೇರಿದಂತೆ ಇತರರು ಹಾಜರಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…