ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ ಅರ್ಜಿ ಸಲ್ಲಿಸಲಿ ಕೈಗಾರಿಕೆ ಸ್ಥಾಪನೆಗೆ ನಮ್ಮ ಸರ್ಕಾರ ಮತ್ತು ಜಿಲ್ಲೆಯ ಶಾಸಕರು ಬೆಂಬಲ ನೀಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಸಕ ರವಿಕುಮಾರ್ ಅವರು ಕೈಗಾರಿಕೆ ಸ್ಥಾಪನೆಗೆ 90 ಎಕ್ಕರೆ ಜಾಗವನ್ನು ಈಗಾಗಲೇ ಗುರುತಿಸಿದ್ದಾರೆ. ನಮಗೆ ಯಾವುದೇ ಕಂಪನಿಯಿಂದ ಕೈಗಾರಿಕೆ ಸ್ಥಾಪನೆ ಮಾಡಲು ಅರ್ಜಿ ಬಂದಿಲ್ಲ ಎಂದು ಹೇಳಿದರು.
ಯಾವುದೇ ಕೈಗಾರಿಕಾ ಸಂಸ್ಥೆಯಿಂದ ಅರ್ಜಿ ಬಂದರೆ. 15 ದಿನದೊಳಗಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರೆದು ಸಭೆ ನಡೆಸಲಾಗುವುದು. ಅರ್ಜಿ ಬಾರದೆ ಹೇಗೆ ಸಭೆ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದರು.
ಸಭೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ ನರೇಂದ್ರ ಸ್ವಾಮಿ, ಶಾಸಕರಾದ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಕೆ.ಆರ್ ನಂದಿನಿ ಹಾಗೂ ಪೋಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.





