ಮಂಡ್ಯ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮದ್ದೂರು ತಾಲ್ಲೂಕಿನ ಜ್ಯೋತಿ ಎಂಬ ರೈತ ಮಹಿಳೆ 97 ಲಕ್ಷ ರೂ ವೆಚ್ಚದ ಕಬ್ಬು ಕಟಾವು ಯಂತ್ರವನ್ನು ಹಾರ್ವೆಸ್ಟ್ ಹಬ್ ಎಂಬ ಯೋಜನೆಯಡಿ ಖರೀದಿಸಿದ್ದು 39,86,000 ರೂ ಸಬ್ಸಿಡಿ ಸರ್ಕಾರದಿಂದ ದೊರೆಯುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಅವರು ಇಂದು ಮದ್ದೂರು ತಾಲ್ಲೂಕಿನ ಬೆಳತೂರು ಗೇಟ್(ಮದ್ದೂರು-ಕೊಪ್ಪ ರಸ್ತೆ) ನಲ್ಲಿ ನಡೆದ ಕಬ್ಬು ಕಟಾವು ಯಂತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೃಷಿ ಮಾಡಲು ಬಹಳ ಜನ ಆಸಕ್ತಿ ಹೊಂದಿದ್ದೀರ. ಬಹಳಷ್ಟು ಜನ ಕೃಷಿ ಇಲಾಖೆಯಿಂದ ದೊರೆಯುವ ಸಂಪನ್ಮೂಲ, ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದೀರ. ಜೊತೆಗೆ ಕೃಷಿ ಬಗ್ಗೆ ತರಬೇತಿ ಪಡೆಯುವುದು, ಸಂಶೋಧನ ಕೇಂದ್ರದಲ್ಲಿ ವಿಚಾರ ವಿನಿಮಯ ಮಾಡಿಕೊಳ್ಳುವ ಪ್ರಕ್ರಿಯೆಗಳು ನಡೆಯುತ್ತಿವೆ. ಅಮೇರಿಕ ಹಾಗೂ ಇನ್ನಿತರೆ ದೇಶಗಳಲ್ಲಿ ಕೃಷಿ ಪದ್ದತಿಯು ಸಂಪೂರ್ಣವಾಗಿ ಯಂತ್ರದಿಂದ ಕೂಡಿರುವುದನ್ನು ನೋಡಿದಾಗ ನಮ್ಮ ದೇಶದ ರೈತರು ಕೃಷಿಯಲ್ಲಿ ಬಹಳ ಆಸಕ್ತಿಯಿಂದ ಯಂತ್ರಗಳನ್ನು ಕಡಿಮೆ ಪ್ರಮಾಣದಲ್ಲಿ ಬಳಸಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಹಲವಾರು ಕಾರಣಗಳಿಂದ ಕೃಷಿ ಕಾರ್ಮಿಕರ ಸಂಖ್ಯೆ ಕಡಿಮೆಯಾಗುತ್ತಿದೆ. ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಹೆಚ್ಚಾಗಬೇಕಿದೆ. ಇದರ ಬಗ್ಗೆ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ನಡೆಸುವ ತರಬೇತಿಯಲ್ಲಿ ಹೆಚ್ಚು ಜನರು ಭಾಗವಹಿಸಬೇಕು ಎಂದರು.
97 ಲಕ್ಷ ರೂ ಗಳ ಕಬ್ಬು ಕಟಾವು ಯಂತ್ರವನ್ನು ಪರಿಶಿಷ್ಟ ಜಾತಿ, ಪಂಗಡದವರಿಗೆ ಇದೆ ಯಂತ್ರ ನೀಡಿದರೆ 49 ಲಕ್ಷ ರೂ ಸಬ್ಸಿಡಿ ನೀಡಲಾಗುವುದು. ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸರ್ಕಾರ ಸದಾ ರೈತರ ಪರವಾಗಿ ಕೆಲಸ ಮಾಡುತ್ತಿದ್ದು, ಕೃಷಿ ಯಂತ್ರೋಪಕರಣಗಳ ಬಳಕೆಯಿಂದ ರೈತರಿಗೆ ಹೆಚ್ಚಿನ ಇಳುವಾರಿ ಹಾಗೂ ಲಾಭ ಬರಲಿದೆ. ಇದನ್ನು ರೈತರು ಮನಗಂಡು ಹೆಚ್ಚು ಉಪಯೋಗಿಸಿಕೊಳ್ಳಬೇಕು ಎಂದರು.
ಕಬ್ಬು ಕಟಾವು ಯಂತ್ರವನ್ನು ಬಾಡಿಗೆಗೆ ನೀಡಿ ಕೆಲವು ವರ್ಷಗಳ ನಂತರ ಯಂತ್ರದಿಂದ ಲಾಭ ಬರಲಿದೆ ಎಂದರು.
ಈ ಯಂತ್ರವನ್ನು ಬೆಳಗಾವಿಯಲ್ಲಿ ಹೆಚ್ಚು ಜನರು ಬಳಸುತ್ತಿದ್ದಾರೆ. ಮೊದಲ ಬಾರಿಗೆ ಬೆಳಗಾವಿಯಲ್ಲಿ 20 ಯಂತ್ರವನ್ನು ನೀಡಲಾಗಿತ್ತು. ಈ ಬಾರಿ ಕಬ್ಬು ಕಟಾವು ಯಂತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು, 100 ಯಂತ್ರಗಳಿಗೆ 500 ಅರ್ಜಿಗಳು ಬಂದಿವೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಕಟಾವಿಗಾಗಿ ಹೊರ ಜಿಲ್ಲೆಯಿಂದ ಅವರಿಗೆ ಮುಂಗಡ ನೀಡಿ ಕರೆತರಲಾಗುತ್ತದೆ. ಇಂತಹ ಯಂತ್ರ ಖರೀದಿಗೆ ರೈತರನ್ನು ಸಕ್ಕರೆ ಕಾರ್ಖಾನೆಗಳು ಪ್ರೋತ್ಸಾಹಿಸಬೇಕು ಎಂದರು.
ಭತ್ತ ಹಾಗೂ ರಾಗಿ ಬೆಳೆಯ ನಾಟಿಯನ್ನು ಮಾಡುವ ರೈತರು ನೀರನ್ನು ಸಮ ಪ್ರಮಾಣದಲ್ಲಿ ಹಾಯಿಸಬೇಕು. ನೀರನ್ನು ಹೆಚ್ಚಾಗಿ ಹಾಯಿಸಿದಲ್ಲಿ ಬೆಳೆ ಇಳುವರಿ ಕಡಿಮೆಯಾಗುವುದು. ವೈಜ್ಞಾನಿಕ ವಿಧಾನವನ್ನು ತಿಳಿದು ಕೃಷಿ ಮಾಡುವುದು ಸೂಕ್ತ. ಭತ್ತ ರಾಗಿಯ ಬಿತ್ತನೆ, ಗೊಬ್ಬರ ಹಾಗೂ ಔಷಧಿಯನ್ನು ಸರ್ಕಾರದಿಂದ ರೈತರಿಗೆ ಯಾವುದೇ ಕೊರತೆ ಬಾರದಂತೆ ನೀಡಲಾಗುತ್ತಿದೆ. ಇನ್ನೂ ಹಲವಾರು ಹೊಸ ಕಾರ್ಯಕ್ರಮಗಳನ್ನು ರೈತರಿಗೆ ನೀಡುವ ಸಲುವಾಗಿ ಸರ್ಕಾರವು ಚಿಂತಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ರವಿಕುಮಾರ್, ಮದ್ದೂರು ಶಾಸಕ ಉದಯ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…
ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…
೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…