Categories: ಮಂಡ್ಯ

97 ಲಕ್ಷ ರೂ ವೆಚ್ಚದ ಕಬ್ಬು ಕಟಾವು ಯಂತ್ರ ವಿತರಿಸಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ:  ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮದ್ದೂರು ತಾಲ್ಲೂಕಿನ ಜ್ಯೋತಿ ಎಂಬ ರೈತ ಮಹಿಳೆ 97 ಲಕ್ಷ ರೂ ವೆಚ್ಚದ ಕಬ್ಬು ಕಟಾವು ಯಂತ್ರವನ್ನು ಹಾರ್ವೆಸ್ಟ್ ಹಬ್ ಎಂಬ ಯೋಜನೆಯಡಿ ಖರೀದಿಸಿದ್ದು 39,86,000 ರೂ ಸಬ್ಸಿಡಿ ಸರ್ಕಾರದಿಂದ ದೊರೆಯುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ  ತಿಳಿಸಿದರು.

ಅವರು ಇಂದು ಮದ್ದೂರು ತಾಲ್ಲೂಕಿನ ಬೆಳತೂರು ಗೇಟ್(ಮದ್ದೂರು-ಕೊಪ್ಪ ರಸ್ತೆ) ನಲ್ಲಿ ನಡೆದ ಕಬ್ಬು ಕಟಾವು ಯಂತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೃಷಿ ಮಾಡಲು ಬಹಳ ಜನ ಆಸಕ್ತಿ ಹೊಂದಿದ್ದೀರ. ಬಹಳಷ್ಟು ಜನ ಕೃಷಿ ಇಲಾಖೆಯಿಂದ ದೊರೆಯುವ ಸಂಪನ್ಮೂಲ, ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದೀರ. ಜೊತೆಗೆ ಕೃಷಿ ಬಗ್ಗೆ ತರಬೇತಿ ಪಡೆಯುವುದು, ಸಂಶೋಧನ ಕೇಂದ್ರದಲ್ಲಿ ವಿಚಾರ ವಿನಿಮಯ ಮಾಡಿಕೊಳ್ಳುವ ಪ್ರಕ್ರಿಯೆಗಳು ನಡೆಯುತ್ತಿವೆ. ಅಮೇರಿಕ ಹಾಗೂ ಇನ್ನಿತರೆ ದೇಶಗಳಲ್ಲಿ ಕೃಷಿ ಪದ್ದತಿಯು ಸಂಪೂರ್ಣವಾಗಿ ಯಂತ್ರದಿಂದ ಕೂಡಿರುವುದನ್ನು ನೋಡಿದಾಗ ನಮ್ಮ ದೇಶದ ರೈತರು ಕೃಷಿಯಲ್ಲಿ ಬಹಳ ಆಸಕ್ತಿಯಿಂದ ಯಂತ್ರಗಳನ್ನು ಕಡಿಮೆ ಪ್ರಮಾಣದಲ್ಲಿ ಬಳಸಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಹಲವಾರು ಕಾರಣಗಳಿಂದ ಕೃಷಿ ಕಾರ್ಮಿಕರ ಸಂಖ್ಯೆ ಕಡಿಮೆಯಾಗುತ್ತಿದೆ. ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಹೆಚ್ಚಾಗಬೇಕಿದೆ. ಇದರ ಬಗ್ಗೆ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ನಡೆಸುವ ತರಬೇತಿಯಲ್ಲಿ ಹೆಚ್ಚು ಜನರು ಭಾಗವಹಿಸಬೇಕು ಎಂದರು.

97 ಲಕ್ಷ ರೂ ಗಳ ಕಬ್ಬು ಕಟಾವು ಯಂತ್ರವನ್ನು ಪರಿಶಿಷ್ಟ ಜಾತಿ, ಪಂಗಡದವರಿಗೆ ಇದೆ ಯಂತ್ರ ನೀಡಿದರೆ 49 ಲಕ್ಷ ರೂ ಸಬ್ಸಿಡಿ ನೀಡಲಾಗುವುದು. ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಸರ್ಕಾರ ಸದಾ ರೈತರ ಪರವಾಗಿ ಕೆಲಸ ಮಾಡುತ್ತಿದ್ದು, ಕೃಷಿ ಯಂತ್ರೋಪಕರಣಗಳ ಬಳಕೆಯಿಂದ ರೈತರಿಗೆ ಹೆಚ್ಚಿನ ಇಳುವಾರಿ ಹಾಗೂ ಲಾಭ ಬರಲಿದೆ. ಇದನ್ನು ರೈತರು ಮನಗಂಡು ಹೆಚ್ಚು ಉಪಯೋಗಿಸಿಕೊಳ್ಳಬೇಕು ಎಂದರು.

ಕಬ್ಬು ಕಟಾವು ಯಂತ್ರವನ್ನು ಬಾಡಿಗೆಗೆ ನೀಡಿ ಕೆಲವು ವರ್ಷಗಳ ನಂತರ ಯಂತ್ರದಿಂದ ಲಾಭ ಬರಲಿದೆ ಎಂದರು.

ಈ ಯಂತ್ರವನ್ನು ಬೆಳಗಾವಿಯಲ್ಲಿ ಹೆಚ್ಚು ಜನರು ಬಳಸುತ್ತಿದ್ದಾರೆ. ಮೊದಲ ಬಾರಿಗೆ ಬೆಳಗಾವಿಯಲ್ಲಿ 20 ಯಂತ್ರವನ್ನು ‌ನೀಡಲಾಗಿತ್ತು. ಈ ಬಾರಿ ಕಬ್ಬು ಕಟಾವು ಯಂತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು, 100 ಯಂತ್ರಗಳಿಗೆ 500 ಅರ್ಜಿಗಳು ಬಂದಿವೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಕಟಾವಿಗಾಗಿ ಹೊರ ಜಿಲ್ಲೆಯಿಂದ ಅವರಿಗೆ ಮುಂಗಡ ನೀಡಿ ಕರೆತರಲಾಗುತ್ತದೆ. ಇಂತಹ ಯಂತ್ರ ಖರೀದಿಗೆ ರೈತರನ್ನು ಸಕ್ಕರೆ ಕಾರ್ಖಾನೆಗಳು ಪ್ರೋತ್ಸಾಹಿಸಬೇಕು ಎಂದರು.

ಭತ್ತ ಹಾಗೂ ರಾಗಿ ಬೆಳೆಯ ನಾಟಿಯನ್ನು ಮಾಡುವ ರೈತರು ನೀರನ್ನು ಸಮ ಪ್ರಮಾಣದಲ್ಲಿ ಹಾಯಿಸಬೇಕು. ನೀರನ್ನು ಹೆಚ್ಚಾಗಿ ಹಾಯಿಸಿದಲ್ಲಿ ಬೆಳೆ ಇಳುವರಿ ಕಡಿಮೆಯಾಗುವುದು. ವೈಜ್ಞಾನಿಕ ವಿಧಾನವನ್ನು ತಿಳಿದು ಕೃಷಿ ಮಾಡುವುದು ಸೂಕ್ತ. ಭತ್ತ ರಾಗಿಯ ಬಿತ್ತನೆ, ಗೊಬ್ಬರ ಹಾಗೂ ಔಷಧಿಯನ್ನು ಸರ್ಕಾರದಿಂದ ರೈತರಿಗೆ ಯಾವುದೇ ಕೊರತೆ ಬಾರದಂತೆ ನೀಡಲಾಗುತ್ತಿದೆ. ಇನ್ನೂ ಹಲವಾರು ಹೊಸ ಕಾರ್ಯಕ್ರಮಗಳನ್ನು ರೈತರಿಗೆ ನೀಡುವ ಸಲುವಾಗಿ ಸರ್ಕಾರವು ಚಿಂತಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ರವಿಕುಮಾರ್, ಮದ್ದೂರು ಶಾಸಕ ಉದಯ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

10 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago