Mysore
18
broken clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಮೇಲುಕೋಟೆ: ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ: ರಥಸಪ್ತಮಿ ಹಿನ್ನೆಲೆಯಲ್ಲಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಇಂದು(ಫೆಬ್ರವರಿ.5) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲದೇ ಈ ವೇಳೆ ಯದುಗಿರಿ ಅಮ್ಮನವರ ದೇಗುಲ ಸೇರಿದಂತೆ ಕ್ಷೇತ್ರಾಧಿ ದೇವತೆಗಳ ದರ್ಶನವನ್ನು ಸಹ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಇವರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಸಾಥ್‌ ನೀಡಿದ್ದಾರೆ.

ಇನ್ನೂ ಚಲುವನಾರಾಯಣಸ್ವಾಮಿ ರಥಸಪ್ತಮಿ ಆಚರಣೆ ಹಿನ್ನೆಲೆ ದೇವರಿಗೆ ಸೂರ್ಯ ಮಂಡಲೋತ್ಸವ ನಡೆಯಿತು. ಇದೇ ವೇಳೆ ಸೂರ್ಯಮಂಡಲ ವಾಹನದಲ್ಲಿ ದೇವರ ವೈಭವದ ಮೆರವಣಿಗೆ ನಡೆಯಿತು. ಇನ್ನೂ ವಾಹನ ಮಂಟಪದಿಂದ ದೇಗುಲದ ಸುತ್ತ ಹಾಗೂ ರಾಜಬೀದಿಗಳಲ್ಲಿ ಸಾಗಿದ ಮೆರವಣಿಯಲ್ಲಿ ಸಚಿವ ಚಲುವರಾಯಸ್ವಾಮಿ, ಪತ್ನಿ ಧನಲಕ್ಷ್ಮಿ, ಪುತ್ರ ಸಚಿನ್ ಮತ್ತು ಸೊಸೆ ಭಾಗವಹಿಸಿದ್ದರು.

Tags: