Minister Cheluvarayaswamy inaugurates additional building KRPete
ಕೆ.ಆರ್.ಪೇಟೆ: ತಾಲ್ಲೂಕಿನ ಸಂತೆಬಾಚಳ್ಳಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೊಠಡಿಗಳನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಉದ್ಘಾಟನೆ ಮಾಡಿದರು.
ಸಿಎಸ್ಆರ್ ಯೋಜನೆಯಡಿ ಈ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಕೈಗಾರಿಕೋದ್ಯಮಿಗಳು ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಹಾಯ ಮಾಡಿದರೆ ಸಮಾಜ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತದೆ ಎಂದರು.
ಇದು ಸ್ಪರ್ಧಾತ್ಮಕ ಯುಗವಾಗಿದ್ದು, ವಿದ್ಯಾರ್ಥಿಗಳು ಜ್ಞಾನರ್ಜನೆಗೆ ದಿನದಲ್ಲಿ ಹೆಚ್ಚಿನ ಸಮಯ ಮೀಸಲಿಡಬೇಕು. ಕಳೆದ ಬಾರಿಗಿಂತಲೂ ಮುಂದಿನ ಸಾಲಿನಲ್ಲಿ ನಡೆಯುವ ಎಸ್.ಎಸ್.ಎಲ್. ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವ ರೀತಿ ಶಿಕ್ಷಕರು ಶ್ರಮಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಕೊಠಡಿ ನಿರ್ಮಾಣಕ್ಕೆ ಸಿ.ಎಸ್.ಆರ್ ಅನುದಾನದಡಿ ಅನುದಾನ ಒದಗಿಸಿದ್ದ ಡೆಲ್ಟಾ ವಾಟರ್ ಇನ್ಫ್ರಾ ಮುಖ್ಯಸ್ಥ ಮೃತ್ಯುಂಜಯ ಸ್ವಾಮಿ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಟಿ.ಮಂಜು, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…