Mysore
17
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕೆ.ಆರ್.‌ಪೇಟೆ: 3.26 ಕೋಟಿ ರೂ ವೆಚ್ಚದ ವಿದ್ಯಾರ್ಥಿನಿಲಯ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ಕೆ.ಅರ್.ಪೇಟೆ: ಇಲ್ಲಿನ ಜಲಸೂರಿನಲ್ಲಿ 3.26 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಇಂದು ಸಚಿವ ಎನ್.ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು.

ವಿದ್ಯಾರ್ಥಿನಿಲಯವನ್ನು ಉತ್ತಮವಾಗಿ ನಿರ್ವಹಿಸಿ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಅಹಾರ ನೀಡಿ. ವಿದ್ಯಾರ್ಥಿನಿಯರು ಸಹ ವಿದ್ಯಾರ್ಥಿನಿಲಯದ ಸ್ವಚ್ಛತೆ ಕಾಪಾಡಲು ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು, ಮೈಶುಗರ್ ಅಧ್ಯಕ್ಷ ಸಿ.ಡಿ ಗಂಗಾಧರ್, ಜಿಲ್ಲಾಧಿಕಾರಿ ಡಾ ಕುಮಾರ ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು.

Tags:
error: Content is protected !!