ಮಂಡ್ಯ

ಶುರುವಾಯ್ತು ಜನತಾ ದರ್ಶನ ಪಾಲಿಟಿಕ್ಸ್ : ನಿನ್ನೆ ಕುಮಾರಣ್ಣ , ಇಂದು ಚೆಲುವರಾಯಸ್ವಾಮಿ

ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಜನತಾ ದರ್ಶನ ಪಾಲಿಟಿಕ್ಸ್‌ ಶುರುವಾದಂತೆ ಕಾಣುತ್ತಿದೆ. ಯಾಕೆಂದರೆ ನಿನ್ನೆಯಷ್ಟೆ ಜಿಲ್ಲೆಯ ಅಂಬೇಡ್ಕರ್‌ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದರು. ಈ ಬೆನ್ನಲ್ಲೆ ಇಂದು ಸಚಿವ ಎನ್‌ ಚೆಲುವರಾಯಸ್ವಾಮಿ ಕೂಡ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

ನಿನ್ನೆ (ಜು.೫ ) ಅಧಿಕಾರಿಗಳು ಗೈರಾಗಿದ್ದರು ಕೂಡ ಎಚ್.ಡಿ ಕುಮಾರಸ್ವಾಮಿ ಅವರು ಬೆಳಗ್ಗೆ ೧೧.೩೦ರಿಂದ ನಿರಂತರವಾಗಿ ಜನತಾ ದರ್ಶನ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳನ್ನ ಆಲಿಸಿ ಪರಿಹಾರ ಒದಗಿಸಲು ಮುಂದಾಗಿದ್ದರು.

ಇನ್ನು ಇಂದು ಹನುಮ ಧ್ವಜ ವಿವಾದ ನಡೆದ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಶಾಸಕ ಗಣಿಗ ರವಿಕುಮಾರ್‌ ಅಧ್ಯಕ್ಷತೆಯಲ್ಲಿ ಸಚಿವ ಚೆಲುವರಾಯಸ್ವಾಮಿ ಅವರಿಂದ ಜನತಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಎಚ್ಡಿಕೆ ನಡೆಸಿದ ಜನತಾ ದರ್ಶನದಲ್ಲಿ ಯಾರೊಬ್ಬ ಅಧಿಕಾರಿಗಳು ಕೂಡ ಹಾಜರಾಗಿರಲಿಲ್ಲ. ಆದರೆ ಇಂದು ನಡೆಯುವ ಕಾರ್ಯಕ್ರಮಕ್ಕೆ ೫೩ ಇಲಾಖೆಗಳ ಜಿಲ್ಲೆಯ ಅಧಿಕಾರಿಗಳು ಖುದ್ದು ಹಾಜರಿರಲು ಸೂಚನೆ ನೀಡಲಾಗಿದೆ. ಈ ಮೂಲಕ ಕುಮಾರಸ್ವಾಮಿ ಅವರಿಗೆ  ಟಕ್ಕರ್‌ ಕೊಡಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

17 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

17 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

17 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

17 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

17 hours ago