ಮಂಡ್ಯ

ತಮ್ಮ ತಪ್ಪು ಮುಚ್ಚಲು ಬಿಜೆಪಿ ಸಿಎಂ ಹೆಸರೇಳಿದ್ರೆ ಸರಿಹೋಗುತ್ತೆ ಅಂದುಕೊಂಡಿದೆ ; ಚೆಲುವರಾಯಸ್ವಾಮಿ

ಮಂಡ್ಯ : ಮುಡಾ ಹಗರಣ ವಿಚಾರವಾಗಿ ನಡೆದಿರುವ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಿಎಂ ಹೆಸರೇಳಿದ್ರೆ ಸರಿ ಹೋಗುತ್ತದೆ ಎಂದು ಬಿಜೆಪಿಯವರು ಅಂದುಕೊಂಡಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು.

ಮುಡಾ ಹಗರಣ ವಿಚಾರವಾಗಿ ವಿಪಕ್ಷಗಳು ಸಿಎಂ ವಿರುದ್ಧ ಆರೋಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,  ನಾನು ಈ ಬಗ್ಗೆ ಮೊನ್ನೆಯೇ ಹೇಳಿದ್ದೇನೆ. ಸಿದ್ದರಾಮಯ್ಯ ಅವರ ಜಮೀನನ್ನು ನೋಟಿಸ್‌ ಇಲ್ಲದೆ, ಅವರ ಅನುಮತಿ ಪಡೆದುಕೊಳ್ಳದೆ ಮುಡಾದವರು ಜಮೀನು ಉಪಯೋಗಿಸಿಕೊಂಡಿದ್ದಾರೆ. ದಯಮಾಡಿ ಸ್ಪಷ್ಟವಾಗಿ ನೀವು ಇದನ್ನ ಅರ್ಥ ಮಾಡಿಕೊಳ್ಳಬೇಕು. ಕ್ಲಿಯರ್‌ ಕಟ್ಟಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಅವರಣ್ಣ ಕೊಟ್ಟಿದ್ದಂತಹ ಜಮೀನನ್ನ ಅನಧಿಕೃತವಾಗಿ ಯಾವುದೇ ಮಾಹಿತಿ ಇಲ್ಲದೆ, ಯಾವುದೇ ನೋಟಿಸ್‌ ಕೊಡದೆ ಮುಡಾದವರು ಅವರಿಂದ ಪಡೆದುಕೊಂಡಿದ್ದಾರೆ. ಬಳಿಕ ಇವರು ಕಾನೂನಿನ ಪ್ರಕಾರ ನಮಗೆ ಪರ್ಯಾಯ ಜಮೀನು ಕೊಡಿ ಎಂದು ಕೇಳಿದ್ದಾರೆ. ಅದಕ್ಕೆ ಮುಡಾದವರು ಸಹ ಜಮೀನು ಕೊಟ್ಟಿದ್ದಾರೆ.

ರೆಸ್ಯುಲೇಶನ್‌ ತಪ್ಪಾಗಿದ್ರೆ ಅಥವಾ ಇವರಿಗೆ ಎಕ್ಟ್ರಾ ಜಮೀನು ಕೊಟ್ಟಿದ್ರೆ, ಅಥವಾ ಬೇರೆಯವರಿಗೆ ಜಮೀನು ಕೊಟ್ಟಿದ್ರೆ ಯಾರದ್ದು ತಪ್ಪು, ಮುಡಾದವರ ತಪ್ಪು. ಯಾರ ಆಡಳಿತ ಇತ್ತು..? ಬಿಜೆಪಿ ಆಡಳಿತ. ಯಾರು ಅಧ್ಯಕ್ಷರಾಗಿದ್ರು..? ಬಿಜೆಪಿಯವರು ಆಗಿದ್ರು. ಬಿ.ವೈ ವಿಜಯೇಂದ್ರ, ಆರ್ ಅಶೋಕ್‌ ಇವರು ಪ್ರತಿಭಟನೆ ಮಾಡಬೇಕಾಗಿದದ್ದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಅಲ್ಲ, ಬೊಮ್ಮಾಯಿ, ಎಚ್‌.ವಿ ರಾಜೀವ್ ವಿರುದ್ಧ. ಅವತ್ತು ಇದ್ದಂತಹ ಆಡಳಿತ ಮಂಡಳಿ ಇದಕ್ಕೆ ಕಾರಣ. ಈಗಾಗಿ ಅವರ ತಪ್ಪು ಮುಚ್ಚಿಟ್ಟುಕೊಳ್ಳಲು ಸಿದ್ರಾಮಯ್ಯ ಹೆಸರೇಳಿದರೆ ಸರಿಹೋಗುತ್ತದೆ ಅಂದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

44 mins ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

2 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

3 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

4 hours ago